ಮಡಿಕೇರಿ: ನಗರದ ಅರಣ್ಯ ಇಲಾಖೆ ವಸತಿಗೃಹದಲ್ಲಿ ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ವರದಿಯಾಗಿದೆ.
ಮಂಡ್ಯ ಮೂಲದ ರಶ್ಮಿ(೨೭) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಎಂದು ಗುರುತಿಸಲಾಗಿದೆ. ರಶ್ಮಿ ಅವರು ಕಳೆದ ೨ ವರ್ಷಗಳಿಂದ ಕೊಡಗಿನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಎಂದು ಹೇಳಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮಡಿಕೇರಿ ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.