ಮಂಡ್ಯ: ಮತ್ತೆ ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ಹಿನ್ನಲೆ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಾಳೆ ಪ್ರತಿಭಟನೆಗೆ ಕರೆ ನೀಡಿದೆ.
ಸಮಿತಿಯ ಪ್ರಮುಖರ ಜೊತೆ ಮಾತುಕತೆ ನಂತರ ಮಾಜಿ ಸಚಿವ ಎಂ ಎಸ್ ಆತ್ಮಾನಂದ ಮಾತನಾಡಿ, ನೀರು ಬಿಡುಗಡೆಗೆ ಸೂಚಿಸಿರುವ ಪ್ರಾಧಿಕಾರದ ನಿರ್ದೇಶನ ಖಂಡನೀಯ. ನಾಳೆ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂದೆ ಪ್ರತಿಭಟನಾ ಧರಣಿ ಹಮ್ಮಿಕೊಳ್ಳಲಾಗಿದೆ. ನಾಳಿನ ಪ್ರತಿಭಟನೆಗೆ ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು, ರೈತ ಸಂಘಟನೆಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರತಿಭಟನೆ ಯಶಸ್ವಿಗೊಳಿಸಲು ಮನವಿ ಮಾಡಿದ್ದಾರೆ.
ನಾಳಿನ ಪ್ರತಿಭಟನೆಯಲ್ಲಿ ಎಲ್ಲರ ಜೊತೆ ಚರ್ಚಿಸಿ ಮುಂದಿನ ಹೋರಾಟದ ರೂಪು ರೇಷಗಳನ್ನು ಪ್ರಕಟಿಸಲಾಗುವುದು ಎಂದರು.