ಬಾಗಲಕೋಟೆ: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮೀ ಯೋಜನೆಗೆ ಬಾಗಲಕೋಟೆಯಲ್ಲಿ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಬಾಗಲಕೋಟೆ ನವನಗರದ ಕಲಾಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ ತಿಮ್ಮಾಪೂರ ಅವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ಶಾಸಕರು ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಮಹಿಳೆಯರು ಮತ್ತು ಸಾರ್ವಜನಿಕರು ಭಾಗಿಯಾಗಿದ್ದರು.
