ಮಂಡ್ಯ: ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ಜಿಲ್ಲೆಯಲ್ಲಿ ಪ್ರತಿಭಟನೆಗಳು ತೀವ್ರಗೊಂಡಿದ್ದು, ಶ್ರೀರಂಗಪಟ್ಟಣದಲ್ಲಿ ಅನ್ನದಾತರಿಂದ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.
ಭೂಮಿ ತಾಯಿ ಹೋರಾಟ ಸಮಿತಿಯಿಂದ ತಮಿಳುನಾಡಿಗೆ ನೀರು ಬಿಡುತ್ತಿರುವುದನ್ನು ಖಂಡಿಸಿ ಕಾವೇರಿ ಸ್ನಾನ ಘಟ್ಟದಿಂದ ತಾಲೂಕು ಕಚೇರಿಯವರೆಗೆ ಅರೆಬೆತ್ತಲೆ ಮೆರವಣಿಗೆ ನಡೆಸಲಾಯಿತು.
ರೈತ ನಾಯಕ ನಂಜುಂಡೇಗೌಡ ನೇತೃತ್ವದಲ್ಲಿ ತಮಟೆ ಬಾರಿಸಿಕೊಂಡು ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ಕಾವೇರಿ ನದಿಗಿಳಿದ ರೈತರು, ಕಾವೇರಿ ನಮ್ಮದು, ನಮ್ಮ ನೀರು ನಮಗೆ ಬೇಕು. ಕಾನೂನಂತೆ ಕಾನೂನು ಅವರಪ್ಪದಂತೆ ಕಾನೂನು. ರೈತ ವಿರೋಧಿ ಸರ್ಕಾರಕ್ಕೆ ಧಿಕ್ಕಾರ. ಕಾವೇರಿ ಪ್ರಾಧಿಕಾರದ ಆದೇಶಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.