Saturday, April 19, 2025
Google search engine

Homeರಾಜಕೀಯಬಿ. ಎಲ್. ಸಂತೋಷ್ ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ: ಜಗದೀಶ್ ಶೆಟ್ಟರ್

ಬಿ. ಎಲ್. ಸಂತೋಷ್ ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ: ಜಗದೀಶ್ ಶೆಟ್ಟರ್

ಹುಬ್ಬಳ್ಳಿ: ಬಿ. ಎಲ್ ಸಂತೋಷ್ ಅವರು ಮೊದಲು ಪಕ್ಷದಲ್ಲಿದ್ದವರನ್ನು ಉಳಿಸಿಕೊಳ್ಳಲಿ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದ್ದಾರೆ.

ಕಾಂಗ್ರೆಸ್ ಶಾಸಕರು ಸಂಪರ್ಕದಲ್ಲಿದ್ದಾರೆ ಎಂಬ ಬಿ.ಎಲ್. ಸಂತೋಷ್ ಹೇಳಿಕೆ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇರೆ ಪಕ್ಷದವರನ್ನು ಕರೆದುಕೊಂಡು ಬಂದು ಹೊಸ ಸರ್ಕಾರ ಮಾಡೋದನ್ನು ಬಿಟ್ಟುಬಿಡಲಿ. ಪಕ್ಷದಲ್ಲಿರುವ ಶಾಸಕರನ್ನು,ಮಾಜಿ ಶಾಸಕರನ್ನು ಉಳಿಸಿಕೊಳ್ಳಲಿ. ಬಿಜೆಪಿ ಪಕ್ಷದ ಅಸ್ತಿತ್ವ ಉಳಸಿಕೊಂಡರೆ ಸಾಕಾಗುತ್ತದೆ ಎಂದು ತಿರುಗೇಟು ನೀಡಿದ್ದಾರೆ.

ಕರ್ನಾಟಕದಲ್ಲಿ ಬಿಜೆಪಿಗೆ ಒಂದು ಸಲವೂ ಬಹುಮತ ಬರಲಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಅಸ್ತಿತ್ವ ಕಳೆದುಕೊಳ್ಳುತ್ತಿದೆ. ದಿನದಿಂದ ದಿನಕ್ಕೆ ಅಧೋಗತಿಗೆ ಹೋಗುತ್ತಿರುವ ಬಿಜೆಪಿ, ಮುಳುಗುತ್ತಿರುವ ಹಡಗಿನಂತಾಗಿದೆ. ಇದಕ್ಕೆ ಕಾರಣ ಬಿಜೆಪಿ ಕೆಲವೇ ಜನರ ಕೈಯಲ್ಲಿರೋದು. ಹಿರಿಯರನ್ನು ಕಡೆಗಣಿಸಿ ಹೊಸಬರನ್ನು ಕರೆದುಕೊಂಡು ಬರೋದು ಬಿಜೆಪಿ ಕೆಲಸ. ರಾಜ್ಯ ಬಿಜೆಪಿ ನಾಯಕರ ಪರಸ್ಥಿತಿ ಇಡೀ ಜಗತ್ತಿಗೆ ಗೊತ್ತಾಗಿದೆ. ಬಿ.ಎಲ್. ಸಂತೋಷ್ ಅವರ ಬಗ್ಗೆ ದೆಹಲಿಯಲ್ಲಿ ಕೂತ ಬಿಜೆಪಿ ನಾಯಕರು ಯೋಚನೆ ಮಾಡಬೇಕು ಎಂದರು.

RELATED ARTICLES
- Advertisment -
Google search engine

Most Popular