ಮಂಡ್ಯ: ಮೂರನೇ ದಿನಕ್ಕೆ ರೈತ ಹಿತರಕ್ಷಣಾ ಸಮಿತಿಯ ಧರಣಿ ಕಾಲಿಟ್ಟಿದ್ದು, ಕಾವೇರಿ ಹೋರಾಟಕ್ಕೆ ಮಾಜಿ ಸಚಿವ ಹಾಗೂ ಜೆಡಿಎಸ್ ನಾಯಕ ಡಿ.ಸಿ ತಮ್ಮಣ್ಣ ಬೆಂಬಲ ಸೂಚಿಸಿದ್ದಾರೆ.
ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಧರಣಿಯಲ್ಲಿ ಪಾಲ್ಗೊಂಡು ಡಿ. ಸಿ ತಮ್ಮಣ್ಣ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ
ಕಾವೇರಿ ನಿರ್ವಾಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಭಟನಾಕಾರರು, ತಕ್ಷಣವೇ ತಮಿಳುನಾಡಿಗೆ ನೀರು ನಿಲ್ಲಿಸಲು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಮಾಜಿ ಎಂಎಲ್ ಸಿ ಕೆ.ಟಿ.ಶ್ರೀಕಂಠೇಗೌಡ, ರೈತ ನಾಯಕಿ ಸುನಂದಾ ಜಯರಾಂ, ಸೇರಿ ರೈತ ಮುಖಂಡರು ಭಾಗಿಯಾಗಿದ್ದಾರೆ.
ಪ್ರತಿಭಟನೆಗೂ ಮುನ್ನ ಜೆಡಿಎಸ್ ಕಾರ್ಯಕರ್ತರಿಂದ ವಿಶೇಷ ಪೂಜೆ:
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿ ಮಂಡ್ಯದ ರೈಲ್ವೆ ನಿಲ್ದಾಣದ ಬಳಿ ಇರುವ ಅಯ್ಯಪ್ಪ ಹಾಗೂ ಆಂಜನೇಯಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಲಾಗಿದೆ.
ಮಾಜಿ ಶಾಸಕ ಸುರೇಶ್ ಗೌಡ ನೇತೃತ್ವದಲ್ಲಿ ಪೂಜೆ ಸಲ್ಲಿಸಿ, ಗುಣಮುಖರಾಗಲೆಂದು ಪ್ರಾರ್ಥಿಸಲಾಗಿದೆ.
101 ಈಡುಗಾಯಿ ಒಡೆದು ಜೆಡಿಎಸ್ ಕಾರ್ಯಕರ್ತರು ಪ್ರಾರ್ಥನೆ ಮಾಡಿಕೊಂಡಿದ್ದಾರೆ.
