ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲಾ ಅಭಿನಂದನಾ ಸಮಿತಿ ಹಾಗೂ ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿ ಆಶ್ರಯದಲ್ಲಿ ಸೆಪ್ಟೆಂಬರ್ 5, ಮಂಗಳವಾರ ಸಂಜೆ 4 ಗಂಟೆಗೆ ಮಂಗಳೂರಿನ ಟೌನ್ ಹಾಲ್ ನಲ್ಲಿ ಮುಸ್ಲಿಂ ಸಮುದಾಯದ ಗಣ್ಯರಿಗೆ ಗೌರವಾರ್ಪಣೆ ಕಾರ್ಯಕ್ರಮ ಯೆನೆಪೋಯ ವೈ ಅಬ್ದುಲ್ಲ ಕುಂಞ ಯವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಹೇಳಿದ್ದಾರೆ.
ಅವರು ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು.
ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ, ಖಾದರ್, ರಾಜ್ಯ ವಸತಿ, ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಸ್ ಸಚಿವ ಝಮೀರ್ ಅಹ್ಮದ್ ಖಾನ್ ಹಾಗೂ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂ, ಖಾನ್ ಅವರಿಗೆ ಸನ್ಮಾನ ಸಮಾರಂಭ ನಡೆಯಲಿದೆ.
ಈ ಕಾರ್ಯಕ್ರಮದಲ್ಲಿ ದ.ಕ. ಖಾಝಿ ತ್ವಾಖಾ ಅಹಮದ್ ಮುಸ್ಲಿಯಾರ್, ಉಡುಪಿ ಜಿಲ್ಲಾ ಖಾ ಅಬ್ದುಲ್ ಹಮೀದ್ ಮುಸ್ಲಿಯಾರ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಝೀರ್ ಅಹಮದ್, ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್, ಶಾಸಕರಾದ ಬಿ.ಎಂ. ಫಾರೂಕ್, ವೇದವ್ಯಾಸ ಕಾಮತ್, ಕರ್ನಾಟಕ ವಕ್ಸ್ ಮಂಡಳಿ ಅಧ್ಯಕ್ಷ ಮೌಲಾನಾ ಶಾಫಿ ಸ ಅದಿ, ವಕ್ಸ್ ಸ್ಥಾಯಿ ಸಮಿತಿ ಅಧ್ಯಕ್ಷ ಅನ್ವರ್ ಪಾಷಾ, ದ.ಕ. ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮುಹಮ್ಮದ್ ಮಸೂದ್ ಮತ್ತಿತರರು ಉಪಸ್ಥಿತರಿರುವರು.
ಈ ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಅಪಾರ ಸಂಖ್ಯೆಯ ಜನರು ಭಾಗವಹಿಸಲಿದ್ದು, ಅದೇ ರೀತಿಯಾಗಿ ಜಿಲ್ಲೆಯ ಮಸೀದಿಗಳ ಆಡಳಿತ ಮಂಡಳಿಗಳ ಅಧ್ಯಕ್ಷರು, ಕಾರ್ಯದರ್ಶಿ ಕೋಶಾಧಿಕಾರಿ, ಸದಸ್ಯರು ಹಾಗೂ ಖತೀಬರು ಭಾಗವಹಿಸಲಿದ್ದಾರೆ.