Saturday, April 19, 2025
Google search engine

Homeರಾಜಕೀಯಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ : ಕೆ.ಎಸ್ ಈಶ್ವರಪ್ಪ ವಾಗ್ದಾಳಿ

ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ : ಕೆ.ಎಸ್ ಈಶ್ವರಪ್ಪ ವಾಗ್ದಾಳಿ

ಮೈಸೂರು : ಸಿದ್ದರಾಮಯ್ಯ ಯಾವಾಗಲೂ ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ, ೨೦೧೩ ರಲ್ಲಿ ಬಿಜೆಪಿ, ಕೆಜೆಪಿ ಎಂದು ವಿಭಾಗ ಆಗಿತ್ತು. ಅದರ ಲಾಭ ಪಡೆದು ಸಿದ್ದರಾಮಯ್ಯ ಅಂದು ಮುಖ್ಯಮಂತ್ರಿ ಆದರು. ಈಗ ಗ್ಯಾರಂಟಿ ಎಂದು ಹೇಳಿಕೊಂಡು ಸಿಎಂ ಆಗಿದ್ದಾರೆ. ಯಾವಾಗಲೂ ಲಾಟರಿ ಮುಖ್ಯಮಂತ್ರಿ ಎಂದು ಮೈಸೂರಿನಲ್ಲಿ ಮಾಜಿ ಸಚಿವ ಕೆ .ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಮೈಸೂರಿಗೆ ಪಕ್ಷದ ಕಾರ್ಯಕ್ರಮದ ಹಿನ್ನೆಲೆ ಆಗಮಿಸಿದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ ಆಗಿದ್ದು, ಯಾವಾಗಲೂ ಅವರು ತಮ್ಮ ಶಕ್ತಿಯ ಮೇಲೆ ಸಿಎಂ ಆಗಿಲ್ಲ. ಮುಂದಿನ ದಿನಗಳಲ್ಲಿ ಲೋಕಸಭಾ ಚುನಾವಣೆ ಬರುತ್ತದೆ. ಆಗ ಕಾಂಗ್ರೆಸ್ ಸ್ಥಿತಿ ಏನು ಎಂದು ಗೊತ್ತಾಗುತ್ತದೆ. ಇದರ ಜೊತೆಗೆ ಗ್ಯಾರಂಟಿ ಯೋಜನೆಗಳ ಸ್ಥಿತಿ ಏನಾಗುತ್ತದೆ ಎಂಬುದನ್ನು ನೋಡುತ್ತಿರಿ ಎಂದು ವ್ಯಂಗ್ಯವಾಡಿದರು.

ಬಳಿಕ, ಸಿದ್ದರಾಮಯ್ಯ ಮುಸಲ್ಮಾನರ ದತ್ತು ಪುತ್ರ ಆಗಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಪ್ರತಾಪ್ ಸಿಂಹನ ವಿರುದ್ಧ ಮಾತನಾಡಿದರೆ ಕಾಂಗ್ರೆಸ್‌ಗೆ ಮತಗಳು ಬರುತ್ತದೆ ಎಂದುಕೊಂಡಿದ್ದಾರೆ. ಆದ್ರೆ, ಇದೆಲ್ಲಾ ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಡೆಯುವುದಿಲ್ಲ ಎಂದು ಹೇಳಿದರು.

ಹಿಂದೂ ಧರ್ಮದ ವಿರುದ್ಧ ಮಾತನಾಡಿದರೆ ಭಸ್ಮ ಆಗುತ್ತಾರೆ : ಸನಾತನ ಹಿಂದೂ ಧರ್ಮ ಮಲೇರಿಯಾ, ಡೆಂಗ್ಯೂ ಇದ್ದಂತೆ ಎಂಬ ಉದಯ ನಿಧಿ ಸ್ಟಾಲಿನ್ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ, ಹಿಂದೂ ಧರ್ಮದ ಬಗ್ಗೆ ಅವಹೇಳನ ಮಾಡಿದರೆ ಭಸ್ಮ ಆಗುತ್ತಾರೆ. ಅವನೇನು ಆಕಾಶದಿಂದ ಇಳಿದು ಬಂದಿಲ್ಲ, ತಾಕತ್ತಿದ್ದರೆ ಅವನು ಅವನ ಧರ್ಮವನ್ನು ಟೀಕೆ ಮಾಡಲಿ, ಮುಸ್ಲಿಂ ಧರ್ಮ ಟೀಕೆ ಮಾಡಿ ನೋಡಲಿ ಎಂದು ಸವಾಲು ಹಾಕಿದರು.

RELATED ARTICLES
- Advertisment -
Google search engine

Most Popular