Sunday, April 20, 2025
Google search engine

Homeರಾಜ್ಯಸುದ್ದಿಜಾಲತಂತ್ರಜ್ಞಾನದ ಅಭಿವೃದ್ಧಿ ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ತಂತ್ರಜ್ಞಾನದ ಅಭಿವೃದ್ಧಿ ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ತಂತ್ರಜ್ಞಾನದ ಅಭಿವೃದ್ಧಿ ಎಲ್ಲರಿಗೂ ದೊರೆಯುವಂತೆ ಮಾಡುವುದು ನಮ್ಮ ಜವಾಬ್ದಾರಿ. ತಂತ್ರಜ್ಞಾನ ಮಾನವನ ಅಭಿವೃದ್ಧಿಗೆ ಸಾಧನವಾಗಿದೆ. ಅಂತರಗಳನ್ನು ಕಡಿಮೆ ಮಾಡಿ ಜೀವನಮಟ್ಟ ಸುಧಾರಣೆ, ಸುಸ್ಥಿರ ಅಭಿವೃದ್ಧಿ ಪ್ರೇರೇಪಿಸುವ ಶಕ್ತಿಯನ್ನು ಇದು ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರು ಟೆಕ್ ಸಮ್ಮಿಟ್ ನಿಮಿತ್ತ ಇಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉದ್ಯಮಿಗಳೊಂದಿಗೆ ಸಂವಾದದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ದೇಶದ ಡಿಜಿಟಲ್ ಭವಿಷ್ಯವನ್ನು ಕರ್ನಾಟಕ ಮುನ್ನಡೆಸಲು ಸಾಧ್ಯವಿದೆ. ನಾವೀನ್ಯತಾ ತಂತ್ರಜ್ಞಾನ ಹಾಗೂ ಪ್ರಗತಿಯೆಡೆಗೆ ನಮ್ಮ ಬದ್ಧತೆಗೆ ಬೆಂಗಳೂರು ಟೆಕ್ ಸಮ್ಮಿಟ್ ಸಾಕ್ಷಿಯಾಗಿದೆ. ತಂತ್ರಜ್ಞಾನದಲ್ಲಿ ನಮ್ಮ ಸಾಧನೆಯನ್ನು ಮಾತ್ರವಲ್ಲದೇ ನಮ್ಮ ರಾಜ್ಯದ ಅದಮ್ಯ ಚೇತನವನ್ನು ವಾಖ್ಯಾನಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನಕ್ಕೆ ಇನ್ನಷ್ಟು ವೇಗವನ್ನು ನೀಡಲು ನಮಗಿರುವ ಅಚಲ ಬದ್ಧತೆಯನ್ನು ಟೆಕ್ ಸಮ್ಮಿಟ್ ಪ್ರತಿನಿಧಿಸುತ್ತದೆ ಎಂದರು.

೮೦ರ ದಶಕದ ಅಂತ್ಯ ಹಾಗೂ ೯೦ರ ದಶಕದಲ್ಲಿಯೇ ಅಂದಿನ ಪ್ರಧಾನಿ ರಾಜೀವ್ ಗಾಂಧಿ ಅವರ ದೂರದೃಷ್ಟಿಯಂತೆ ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ಐಟಿ, ಬಿಟಿಗೆ ಭದ್ರ ಬುನಾದಿ ಹಾಕಿತ್ತು. ನೀತಿ ನಿರೂಪಣೆ, ತಂತ್ರಜ್ಞಾನ ಹಾಗೂ ಮೂಲಸೌಕರ್ಯದಲ್ಲಿ ಹೂಡಿಕೆ ಮಾಡಲಾಯಿತು. ಕರ್ನಾಟಕದ ಮೊಟ್ಟಮೊದಲ ಐಟಿ ನೀತಿಯನ್ನು ಅಂದಿನ ಕಾಂಗ್ರೆಸ್ ನೇತೃತ್ವದ ಸರ್ಕಾರ ೧೯೯೨ರಲ್ಲಿ ರೂಪಿಸಿತು. ಈ ನೀತಿಯು ದೇಶಕ್ಕೇ ಮಾದರಿ ಐಟಿ ನೀತಿಯಾಗಿ ಹೊರಹೊಮ್ಮಿತು. ಕಾಂಗ್ರೆಸ್ ಸರ್ಕಾರ ರಾಜಕೀಯ ವ್ಯವಸ್ಥೆಯಲ್ಲಿ ಸದಾ ಸ್ಥಿರತೆಯನ್ನು ತಂದುಕೊಟ್ಟಿದ್ದು, ಆಡಳಿತದಲ್ಲಿ ಸುಸ್ಥಿರತೆ ತರಲು ಹಾಗೂ ದೀರ್ಘಾವಧಿ ಹೂಡಿಕೆಗಳನ್ನು ಕೈಗೊಳ್ಳಲು ಶ್ರಮಿಸಿದೆ ಎಂದರು.

RELATED ARTICLES
- Advertisment -
Google search engine

Most Popular