ಧಾರವಾಡ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಅಭಿಯೋಗ ಸರಕಾರಿ ವ್ಯಾಜ್ಯಗಳ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಅಂಜುಮನ್ ಕಲಾ ಮತ್ತು ವಾಣಿಜ್ಯ ಮತ್ತು ವಿಜ್ಞಾನ ಮಹಾವಿದ್ಯಾಲಯ ಧಾರವಾಡ ಇವರ ಸಂಯುಕ್ತ ಆಶ್ರಯದಲ್ಲಿ ಮಾದಕ ವಸ್ತುಗಳೆಂಬ ರಾಕ್ಷಸರಿಂದ ಮಕ್ಕಳನ್ನು ಹಾಗೂ ಯುವ ಜನಾಂಗವನ್ನು ರಕ್ಷಿಸಿ. ನಮ್ಮ ಮಕ್ಕಳ ರಕ್ಷಣೆ ನಮ್ಮ ಜವಾಬ್ದಾರಿ ವಿಶೇಷ ಅಭಿಯಾನವನ್ನು ಅಂಜುಮನ್ ಕಲಾ ಮತ್ತು ವಾಣಿಜ್ಯ ಮತ್ತು ವಿಜ್ಞಾನ ಪದವಿ ಪೂರ್ವ ಮಹಾವಿದ್ಯಾಲಯ ಸಭಾಂಗಣದಲ್ಲಿ ಇಂದು (ಸೆ.4) ಹಮ್ಮಿಕೊಳ್ಳಲಾಯಿತು.
ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾದಕ ವಸ್ತುಗಳ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಕುರಿತು ಹಾಗೂ ಮಕ್ಕಳ ಹಕ್ಕುಗಳ ಬಗ್ಗೆ, ಜಿಲ್ಲಾ ಕಾನೂನು ಸೇವೆಗಳ ಕಾರ್ಯವೈಖರ್ಯಗಳ ಕುರಿತು ಹಿರಿಯ ಸಿವಿಲ್ ನ್ಯಾಯಾಧೀಶ ಪಿ.ಎಫ್. ದೊಡ್ಡಮನಿ ಹಾಗೂ ವಿಷಯ ತಜ್ಞರು ಮಕ್ಕಳಿಗೆ ಕಾನೂನು ಅರಿವು ಮೂಡಿಸಿದರು.
