ತುಮಕೂರು: ಕ್ಷುಲ್ಲಕ ಕಾರಣಕ್ಕೆ ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿರುವ ಘಟನೆ ತುಮಕೂರು ಜಿಲ್ಲೆ ಪಾವಗಡಲ್ಲಿ ನಡೆದಿದೆ.
ಇಂದಿರಾ ಕ್ಯಾಂಟಿನ್ ಮುಂಭಾಗದಲ್ಲಿ ಯುವಕರು ವಾಹನ ನಿಲುಗಡೆ ಮಾಡಿದ್ದು, ಇದನ್ನು ಪ್ರಶ್ನಿಸಿದ್ದಕ್ಕೆ ಕ್ಯಾಂಟೀನ್ ಸಿಬ್ಬಂದಿ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.
ಘಟನೆಯಲ್ಲಿ ನಾಗರಾಜ್ ಮತ್ತು ಮಂಜು ಎಂಬುವರಿಗೆ ಗಾಯವಾಗಿದ್ದು, ತುಮಕೂರಿನ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹಲ್ಲೆ ಮಾಡಿದ ಯುವಕರ ವಿರುದ್ಧ ಪಾವಗಡ ಪೋಲಿಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.