ತುಮಕೂರು: ಇಂದು ತುಮಕೂರಿನಲ್ಲಿ ಕ್ಷೀರಭಾಗ್ಯ ದಶಮಾನೋತ್ಸವ ನಡೆಯಲಿದ್ದು, ಸಕಲ ಸಿದ್ದತೆಗಳನ್ನು ಕೈಗೊಳ್ಳಲಾಗಿದೆ.
ಸಿದ್ಧರಾಮಯ್ಯ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ತುಮಕೂರಿನ ಮಧುಗಿರಿಗೆ ಆಗಮಿಸುತ್ತಿದ್ದಾರೆ. ಕ್ಷೀರ ಭಾಗ್ಯ ದಶಮಾನೋತ್ಸವ ಕಾರ್ಯಕ್ರಮವನ್ನು ಸಿದ್ಧರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ.
ಗೃಹ ಸಚಿವ ಡಾ. ಜಿ. ಪರಮೇಶ್ವರ್, ಸಚಿವ ಕೆ.ಎನ್ ರಾಜಣ್ಣ, ಕೆಎಂಎಫ್ ನ ಅಧ್ಯಕ್ಷ ಭೀಮನಾಯಕ ಹಾಗೂ ಇತರೆ ಕಾಂಗ್ರೆಸ್ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.