ಬೆಂಗಳೂರು: ದೇಶಾದ್ಯಂತ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ ಕಳೆಗಟ್ಟಿದೆ. ದೇಶದ ಹಲವೆಡೆ ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಲಾಗುತ್ತಿದೆ. ಹಬ್ಬವನ್ನು ತಮ್ಮದೇ ಆದ ರೀತಿಯಲ್ಲಿ ಭಕ್ತಗಣ ಆಚರಣೆ ಮಾಡುತ್ತಿದೆ. ಇಂದು (ಸೆ. ೬) ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಅಮೂಲ್ಯ ಅವರು ಮಕ್ಕಳಿಗೆ ಕೃಷ್ಣನ ವೇಷ ಹಾಕಿದ್ದಾರೆ.

ನಟಿ ಅಮೂಲ್ಯ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಆದರೆ, ಅವರು ಸೋಶಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ. ಆಗಾಗ ಅವರು ಅಭಿಮಾನಿಗಳಿಗಾಗಿ ಹೊಸ ಹೊಸ ಫೋಟೋ ಹಂಚಿಕೊಳ್ಳುತ್ತಾರೆ. ನಟಿ ಅಮೂಲ್ಯ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಅಮೂಲ್ಯ ಅವರು ಮಕ್ಕಳಿಗೆ ಅಥರ್ವ್ ಹಾಗೂ ಆಧವ್ ಎಂದು ಹೆಸರು ಇಟ್ಟಿದ್ದಾರೆ. ಇವರ ಕ್ಯೂಟ್ ಫೋಟೋಗಳನ್ನು ಅಮೂಲ್ಯ ಆಗಾಗ ಶೇರ್ ಮಾಡಿಕೊಳ್ಳುತ್ತಾ ಇರುತ್ತಾರೆ. ಈಗ ಇವರ ಕೃಷ್ಣನ ಗೆಟಪ್ ಸಾಕಷ್ಟು ಗಮನ ಸೆಳೆದಿದೆ.
ಕನ್ನಡದಲ್ಲಿ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಮದುವೆ ಆದ ಬಳಿಕ ಅವರು ನಟನೆಯಿಂದ ದೂರ ಉಳಿದುಕೊಂಡಿದ್ದಾರೆ. ಮಕ್ಕಳ ಆರೈಕೆಯಲ್ಲಿ ಅಮೂಲ್ಯ ಅವರು ಬ್ಯುಸಿ ಆಗಿದ್ದಾರೆ. ಅವರು ನಟನೆಗೆ ಮರಳಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ. ಬಾಲ ನಟಿಯಾಗಿ ಅಮೂಲ್ಯ ಚಿತ್ರರಂಗಕ್ಕೆ ಕಾಲಿಟ್ಟರು.
