ಧಾರವಾಡ : ಇಂದು ನಗರದ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ (ಸೆ.6) ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಆಶ್ರಯದಲ್ಲಿ ಬೆಳಗ್ಗೆ ಭಗವಾನ್ ಶ್ರೀ ಕೃಷ್ಣ ಜಯಂತಿಯನ್ನು ಆಚರಿಸಲಾಯಿತು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಶ್ರೀಕೃಷ್ಣನ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಕೃಷ್ಣನ ಸಂದೇಶಗಳು ಸಾರ್ವಕಾಲಿಕ, ಭಾರತೀಯರು ಶ್ರೀಕೃಷ್ಣನಿಗೆ ಶ್ರೇಷ್ಠ ಸ್ಥಾನ ನೀಡಿದ್ದಾರೆ. ಮಹಾಭಾರತ ಮತ್ತು ಭಗವದ್ ಗೀತೆಗಳಲ್ಲಿ ಕೃಷ್ಣನ ಸಂದೇಶಗಳನ್ನು ವಿವರಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಡಾ. ಕೆ.ಆರ್.ದುರ್ಗದಾಸ್ ವಿಶೇಷ ಉಪನ್ಯಾಸ ನೀಡಿದರು. ಹಾಗೂ ಎಸ್‌ಎಸ್‌ಎಲ್‌ಸಿ, ಪಿಯುಸಿ ಹಾಗೂ ಪದವಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು. ಜಿಲ್ಲಾ ಗೊಲ್ಲ, ಯಾದವ ಸಮಾಜ ಸೇರಿದಂತೆ ವಿವಿಧ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿ, ಆರತಿ ದೇವಶಿಖಾಮಣಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.