ಪಿರಿಯಾಪಟ್ಟಣ: ತಾಲೂಕಿನ ಬಾರಸೆ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿಗ ಈ.ಪಿ ಲೋಕೇಶ್ ಉಪಾಧ್ಯಕ್ಷರಾಗಿ ಎಸ್.ಆರ್ ಮಹೇಂದ್ರ ಅವಿರೋಧ ಆಯ್ಕೆಯಾದರು.
ಸಂಘದ ಕಚೇರಿಯಲ್ಲಿ ನಡೆದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಈ.ಪಿ ಲೋಕೇಶ್ ಉಪಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್ ಮಹೇಂದ್ರ ಹೊರತುಪಡಿಸಿ ಮತ್ಯಾರು ನಾಮಪತ್ರ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿ ಶಿವಕುಮಾರ್ ಅವಿರೋಧ ಆಯ್ಕೆ ಘೋಷಿಸಿದರು ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಸಿಹಿ ಹಂಚಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನು ಅಭಿನಂದಿಸಿದರು.
ನೂತನ ಅಧ್ಯಕ್ಷ ಈ.ಪಿ ಲೋಕೇಶ್ ಮಾತನಾಡಿ ಅಧ್ಯಕ್ಷರಾಗಲು ಸಹಕರಿಸಿದ ಎಲ್ಲಾ ನಿರ್ದೇಶಕರು ಮತ್ತು ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಗರು ಹೆಚ್ಚು ಜಯಗಳಿಸಲು ಸಹಕರಿಸಿದ ಶೇರುದಾರ ಸದಸ್ಯರು ಹಾಗೂ ಪಕ್ಷದ ವರಿಷ್ಠರಿಗೆ ಧನ್ಯವಾದ ತಿಳಿಸಿ ಸಂಘದ ಅಭಿವೃದ್ಧಿಗೆ ಪ್ರಾಮಾಣಿಕ ಶ್ರಮಿಸಿ ಸರ್ಕಾರದಿಂದ ದೊರೆಯುವ ಸವಲತ್ತುಗಳನ್ನು ನಿಗದಿತ ಸಮಯದಲ್ಲಿ ತಲುಪಿಸುವ ಭರವಸೆ ನೀಡಿದರು.
ಈ ಸಂದರ್ಭ ನಿರ್ಧೇಶಕರಾದ ಬಾವಾಜಾನ್, ಟಿ.ವೀರಭದ್ರ, ಕೆ.ಜೆ ಮಂಜುನಾಥ, ಬಿ.ಕೆ ಸಿದ್ದರಾಜೇಅರಸ್, ಬಸವರಾಜು, ಮಹದೇವ್, ಅಮೃತೇಶ್, ಭಾಗ್ಯಮ್ಮ, ಸಿಇಒ ನಂದೀಶ್, ಗುಮಾಸ್ತ ಲೋಹಿತ್ ಮತ್ತಿತರಿದ್ದರು.