ಮೈಸೂರು: ಪ್ರೇಮಕುಮಾರಿ ಪ್ರಕರಣದಲ್ಲಿ ವಂಚನೆ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಮಾಜಿ ಶಾಸಕ ಎಸ್.ಎ ರಾಮದಾಸ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಮಾಜಿ ಶಾಸಕ ಎಸ್.ಎ ರಾಮದಾಸ್ ವಿರುದ್ಧ 2013ರಲ್ಲಿ ಪ್ರೇಮಕುಮಾರಿ ಎಂಬುವವರು ತನ್ನನ್ನು ಮದುವೆಯಾಗಿ ವಂಚಿಸಿದ್ದಾರೆ. ಮತ್ತು ಬೆದರಿಕೆ, ಕೊಲೆ ಯತ್ನ ಸೇರಿ ಹಲವು ಆರೋಪ ಮಾಡಿ ಮೈಸೂರಿನ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಈ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ರಾಮದಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಪ್ರರಣವನ್ನು ರದ್ದುಪಡಿಸಲು ನಿರಾಕರಿಸಿತ್ತು.
ಇದನ್ನು ಪ್ರಶ್ನಿಸಿ ರಾಮದಾಸ್ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಇದೀಗ ಸುಪ್ರೀಂಕೋರ್ಟ್ ಕೂಡ ಅರ್ಜಿಯನ್ನು ವಜಾಗೊಳಿಸಿದೆ.