Saturday, April 19, 2025
Google search engine

Homeಅಪರಾಧಬೆಂಗಳೂರಿನ ಪಬ್‌ಗಳ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಗುಂಗಲ್ಲಿ ಅಪ್ರಾಪ್ತರು

ಬೆಂಗಳೂರಿನ ಪಬ್‌ಗಳ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಗುಂಗಲ್ಲಿ ಅಪ್ರಾಪ್ತರು

ಬೆಂಗಳೂರು: ಸಿಲಿಕಾನ್ ಸಿಟಿಯ ಪಬ್, ಬಾರ್ ಆಂಡ್ ರೆಸ್ಟೋರೆಂಟ್ ಮತ್ತು ಹುಕ್ಕಾ ಬಾರ್‌ಗಳ ಮೇಲೆ ಸಿಸಿಬಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಕೋರಮಂಗಲ, ಇಂದಿರಾನಗರ, ಹೆಚ್‌ಎಸ್‌ಆರ್ ಲೇಔಟ್, ಬಾಣಸವಾಡಿ, ಹೆಣ್ಣೂರು ಸೇರಿದಂತೆ ನಗರದ ಹಲವು ಕಡೆ ದಾಳಿ ನಡೆಸಲಾಗಿದೆ.

ದಾಳಿ ವೇಳೆ ಸುಮಾರು ಕಡೆಗಳಲ್ಲಿ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಅಪ್ರಾಪ್ತ ವಯಸ್ಸಿನವರಿಗೆ ಧೂಮಪಾನಕ್ಕೆ ಅವಕಾಶ, ಮದ್ಯ ಸರಬರಾಜು ಮಾಡುತ್ತಿರುವುದು ಕಂಡು ಬಂದಿದೆ. ಇದೇ ಸಂದರ್ಭದಲ್ಲಿ ಪಬ್ ಒಂದರಲ್ಲಿ ಪತ್ತೆಯಾದ ಅಪ್ರಾಪ್ತರು ನಾವು ಶಾಸಕರ ಕಡೆಯವರು, ಕಿರುತೆರೆ ಕಲಾವಿದರು ಎಂದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಪ್ರಸಂಗವೂ ನಡೆದಿದೆ.

ನಾಲ್ಕು ಕಡೆಗಳಲ್ಲಿ ಪಬ್ ಮಾಲೀಕರ ವಿರುದ್ಧ ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ, ಬಾಲ ನ್ಯಾಯ ಕಾಯ್ದೆ, ಅಬಕಾರಿ ನಿಯಮಗಳ ಉಲ್ಲಂಘನೆ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular