Tuesday, April 8, 2025
Google search engine

Homeರಾಜ್ಯರೈತ ಜಾತ್ರೆ, ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ರೈತ ಜಾತ್ರೆ, ಕೃಷಿ ಮೇಳ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಧಾರವಾಡ: ಇಂದಿನಿಂದ ನಾಲ್ಕು ದಿನಗಳ ಕಾಲ ನಡೆಯುವ ಕೃಷಿ ಮೇಳವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. ಕೃಷಿ ವಿಶ್ವ ವಿದ್ಯಾಲಯದ ರೈತ ಜ್ಞಾನಾಭಿವೃದ್ಧಿ ಕೇಂದ್ರದಲ್ಲಿ ಆಯೋಜಿಸಿರುವ ಫಲಪುಷ್ಪ ಪ್ರದರ್ಶನ ಹಾಗೂ ವಿಸ್ಮಯಕಾರಿ ಕೀಟ ಪ್ರಪಂಚ ಸೇರಿದಂತೆ ಹಲವು ಮೇಳಗಳನ್ನು ಸಿಎಂ ಉದ್ಘಾಟಿಸಿದರು.

ಬಳಿಕ ಹಲವು ಬಗೆಯ ಸಸ್ಯಗಳನ್ನು ಹಾಗೂ ವಿವಿಧ ಹೂವಿನ ಅಲಂಕಾರ ಸಿಎಂ ಸಿದ್ದರಾಮಯ್ಯ ವೀಕ್ಷಣೆ ಮಾಡಿದರು. ಸಿಎಂಗೆ ಸಚಿವ ಸಂತೋಷ್ ಲಾಡ್ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಸಾಥ್ ನೀಡಿದರು. ಸುಸ್ಥಿರ ಕೃಷಿಗೆ ಸಿರಿಧಾನ್ಯಗಳು ಘೋಷ್ಯವಾಕ್ಯದಲ್ಲಿ ಕೃಷಿ ಮೇಳ ನಡೆಯಲಿದ್ದು, ನಾಲ್ಕು ದಿನಗಳ ಮೇಳಕ್ಕೆ ೧೦ ಲಕ್ಷಕ್ಕೂ ಹೆಚ್ಚು ಜನ ಪಾಲ್ಗೊಳ್ಳುವ ನಿರೀಕ್ಷೆಯಿದೆ. ಪ್ರದರ್ಶನಕ್ಕಾಗಿ ೧೯೧ ಹೈಟೆಕ್ ಮಳಿಗೆ, ೩೫೧ ಸಾಮಾನ್ಯ ಮಳಿಗೆ, ೨೪ ಯಂತ್ರೋಪಕರಣ, ೫೦ ಜಾನುವಾರು ಪ್ರದರ್ಶನ ಮಳಿಗೆಗಳನ್ನು ಹಾಕಲಾಗಿದೆ.

ಕೃಷಿ ಮೇಳದ ಅಂಗವಾಗಿ ಫಲ-ಪುಷ್ಪ ಮತ್ತು ತರಕಾರಿ ಬೆಳೆಗಳ ಪ್ರದರ್ಶನ, ಪರಿಸರ ಸಂರಕ್ಷಣೆ, ಕೃಷಿ ಯಂತ್ರೋಪಕರಣಗಳು, ಯಶಸ್ವಿ ರೈತರೊಂದಿಗೆ ಸಂವಾದ, ಕೃಷಿ ಸಮಾಲೋಚನೆ, ವಿವಿಧ ಪ್ರದರ್ಶನ, ವಿಸ್ಮಯಕಾರಿ ಕೀಟ ಪ್ರಪಂಚ, ಕೃಷಿ, ಅರಣ್ಯ ಜಾನುವಾರುಗಳ ಪ್ರದರ್ಶನ ಹುಟ್ಟುವಳಿಗಳ ಮೌಲ್ಯವರ್ಧನೆಗಾಗಿ ಅನುಷ್ಠಾನಗೊಂಡಿರುವ ವಿವಿಧ ಪ್ರಾತ್ಯಕ್ಷಿಕೆಗಳ ವೀಕ್ಷಣೆ ಮತ್ತು ಪ್ರದರ್ಶನ, ವಸ್ತ್ರ ವಿನ್ಯಾಸ, ವಿವಿಧ ಸಂಘ-ಸಂಸ್ಥೆಗಳಿಂದ ಉತ್ಪನ್ನಗಳ ಮಾರಾಟ ಮಾಹಿತಿ ಇತ್ಯಾದಿ ವಿಶಿಷ್ಟ ಕಾರ್ಯಕ್ರಮಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಂಘಟಿಸಲಾಗಿದೆ.

ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ ಬರುವ ಪ್ರತಿ ಜಿಲ್ಲೆಯ ವಿಶೇಷ ಸಾಧನೆಗೈದ ಕೃಷಿಕ ಹಾಗೂ ಶ್ರೇಷ್ಠ ಕೃಷಿ ಮಹಿಳೆಯರನ್ನು ಆಯ್ಕೆ ಮಾಡಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವುದು. ಇದರೊಂದಿಗೆ ವಿವಿಧ ಅಭಿವೃದ್ಧಿ ಇಲಾಖೆಗಳು, ಬೀಜ, ಗೊಬ್ಬರ, ಕೀಟನಾಶಕ ಉತ್ಪಾದಿಸುವ ಘಟಕಗಳು ಮತ್ತು ಅನೇಕ ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳು ೪೫೦ ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಸ್ಟಾಕ್‌ಗಳು ಭಾಗವಹಿಸಲಿವೆ ಎಂದು ಹೇಳಿದ್ದರು.

RELATED ARTICLES
- Advertisment -
Google search engine

Most Popular