Saturday, April 19, 2025
Google search engine

Homeರಾಜ್ಯವಿಧಿ ವಿಧಾನಗಳ ಪ್ರಕಾರ ದಸರಾ ಆಚರಣೆ: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್

ವಿಧಿ ವಿಧಾನಗಳ ಪ್ರಕಾರ ದಸರಾ ಆಚರಣೆ: ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್


ಮಂಡ್ಯ:ಪ್ರತಿ ವರ್ಷದಂತೆ ಮೈಸೂರು ದಸರಾ ಆಚರಣೆ ಮಾಡಲಾಗುತ್ತದೆ. ಯಾವುದೇ ಬದಲಾವಣೆ ಆಗಲ್ಲ.‌ವಿಧಿವಿಧಾನಗಳ ಪ್ರಕಾರ ದಸರಾ ಆಚರಣೆ ಮಾಡಲಾಗುವುದು. ದಸರಾ ಆಚರಣೆ ವಿಜೃಂಭಣೆಯಿಂದ ನಡೆಯುವ ಬಗ್ಗೆ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಮಂಡ್ಯದಲ್ಲಿ ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು
ರೈತರ ಕಷ್ಟದಲ್ಲಿ ನಾವು ಜೊತೆ ಇದ್ದೇವೆ. ಅದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಮಹಿಷಾ ದಸರಾ ಆಚರಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಇದರ ಬಗ್ಗೆ ನನ್ನ ಅಭಿಪ್ರಾಯ ಇಲ್ಲ. ಸಂವಿಧಾನದ ಪ್ರಕಾರ ಯಾರು ಬೇಕಾದರೂ, ಏನು ಬೇಕಾದರೂ ಅನುಸರಿಸಬಹುದು‌ ಎಂದು ಹೇಳಿದರು.
ಸನಾತನ ಧರ್ಮ ಎಲ್ಲದಕ್ಕೂ ಮೂಲ:
ಹಿಂದೂ ಧರ್ಮದ ಬಗ್ಗೆ ತಮಿಳುನಾಡಿನ ಸಿಎಂ ಪುತ್ರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಮಾತನಾಡಿ, ಧರ್ಮದ ಬಗ್ಗೆ ಮಾತನಾಡುವುದು ತಪ್ಪು. ಎಲ್ಲಾ ಧರ್ಮಕ್ಕೂ ಒಂದು ಗೌರವ ಮರ್ಯಾದೆ ಇರಬೇಕು. ನಮ್ಮ ನಾಡು ದೇಶದಲ್ಲಿ ಸನಾತನ ಧರ್ಮ ಎಲ್ಲಕ್ಕೂ ಮೂಲ. ನಾವು ಅವರ ಹೇಳಿಕೆ ಒಪ್ಪುವುದಿಲ್ಲ. ಧರ್ಮಕ್ಕೆ ಗೌರವ ಕೊಡಬೇಕು ಎಂದು ಹೇಳಿದರು.
ರಾಜ್ಯದ ಜನರ ಜೊತೆ ನಾವಿದ್ದೇವೆ:
ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ನೀರು ಬಿಟ್ಟ ವಿಚಾರವಾಗಿ ಮಾತನಾಡಿ, ‌ಇತಿಹಾಸ ನೋಡಿ ನಮ್ಮ ರಾಜ್ಯ ಸುಪ್ರೀಂ ಕೋರ್ಟ್ ಏನು ನಿರ್ಧಾರ ತೆಗೆದುಕೊಂಡಿದ್ದಾರೋ ನೋಡಬೇಕು. ಅದರ ಜೊತೆಗೆ ಸಮಸ್ಯೆ ಬಗೆಹರಿಸುವ ಬಗ್ಗೆ ರಾಜ್ಯ ಸರ್ಕಾರ ತಿರ್ಮಾನ ಮಾಡಬೇಕು. ಸಂಪೂರ್ಣವಾಗಿ ರಾಜ್ಯ ಹಾಗೂ ರೈತರ ಜೊತೆ ನಮ್ಮ ಬೆಂಬಲ ಇದೆ. ಅಧಿಕಾರದಲ್ಲಿರುವವರನ್ನ ಪ್ರಶ್ನೆ ಮಾಡಿ. ನಾವು ರಾಜ್ಯದ ಜೊತೆ ಇರ್ತೇವೆ ಎಂದರು.

ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ:
ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದರು. ‌
ಜೆಡಿಎಸ್-ಬಿಜೆಪಿ ಒಂದಾಣಿಕೆ ವಿಚಾರವಾಗಿ ಮಾತನಾಡಿ, ರಾಜಕೀಯದಲ್ಲಿ ನಮ್ಮ ಪಾತ್ರ ಏನು ಇಲ್ಲ. ನಾವು ಸಮಾಜದ ಕಾರ್ಯಕ್ರಮದಲ್ಲಿ ಸದಾ ಭಾಗವಹಿಸುತ್ತೇವೆ. ಅದರ ಜೊತೆಗೆ ಸಮಾಜದ ಹಿತರಕ್ಷಣೆಗಾಗಿ ರಾಜಕೀಯ ಮಾಡುವ ಅವಶ್ಯಕತೆ ಇಲ್ಲ. ಬೇರೆ ರೀತಿಯಲ್ಲೂ ಮಾಡಬಹುದು ಅದನ್ನ ಮಾಡಲು ನಾವು ಪ್ರಯತ್ನ ಮಾಡುತ್ತೇವೆ ಎಂದರು.

RELATED ARTICLES
- Advertisment -
Google search engine

Most Popular