ಬೆಂಗಳೂರು: ಕರ್ನಾಟಕ ಸರ್ಕಾರದ ‘ಶಕ್ತಿ ಯೋಜನೆ’ಯ ವಿರುದ್ಧ ರಾಜ್ಯ ಖಾಸಗಿ ಸಾರಿಗೆ ಸಂಘಗಳ ಒಕ್ಕೂಟವು ಬೆಂಗಳೂರಿನಲ್ಲಿ ಇಂದು ಖಾಸಗಿ ಸಾರಿಗೆ ಬಂದ್ ಗೆ ಕರೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಟೋ, ಟ್ಯಾಕ್ಸಿ, ಕ್ಯಾಬ್, ಖಾಸಗಿ ಬಸ್, ಗೂಡ್ಸ್ ವಾಹನ, ಶಾಲಾ ವಾಹನಗಳು ಸೇರಿ ಎಲ್ಲ ಖಾಸಗಿ ವಾಹನಗಳ ಸಂಚಾರ ಸ್ತಬ್ಧವಾಗಿದೆ. ಹೀಗಾಗಿ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ ಬಿಎಂಟಿಸಿ ಬಸ್ ನಲ್ಲಿ ಪ್ರಯಾಣಿಸಿದರು.
ಖಾಸಗಿ ವಾಹನಗಳ ಸಂಚಾರವಿಲ್ಲದೇ ಇರುವುದರಿಂದ ಅವರು ಬಿಎಂಟಿಸಿ ಬಸ್?ನಲ್ಲಿ ಮನೆಗೆ ತೆರಳಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿರುವ ಕುಂಬ್ಳೆ, ಬಿಎಂಟಿಸಿ ಬಸ್‌ನಲ್ಲಿ ನಿಂತು ಪ್ರಯಾಣಿಸುತ್ತಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ‘ಇಂದು ವಿಮಾನ ನಿಲ್ದಾಣದಿಂದ ಮನೆಗೆ ಮರಳಲು ಬಿಎಂಟಿಸಿ ಪ್ರಯಾಣ’ ಎಂದು ಕ್ಯಾಪ್ಶನ್ ನೀಡಿದ್ದಾರೆ.