ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರು ನಗರದ ಖಾಸಗಿ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿಯೊಬ್ಬರ ಮೃತದೇಹ ಪತ್ತೆಯಾದ ಘಟನೆ ಇಂದು ನಡೆದಿದೆ.
ಕೇರಳದ ತಿರುವನಂತಪುರಂ ನಿವಾಸಿ ಗೋಪು ಆರ್. ನಾಯರ್ ಮೃತಪಟ್ಟ ಅಧಿಕಾರಿ. ಇವರು ರವಿವಾರ ಮಂಗಳೂರಿಗೆ ಆಗಮಿಸಿ ಈ ಹೊಟೇಲ್ ನಲ್ಲಿ ತಂಗಿದ್ದು, ಹೊಟೇಲ್ ರೂಮ್ ನಿಂದ ಹೊರ ಹೋಗಿದ್ದರು ಎನ್ನಲಾಗಿದೆ.
ಘಟನೆ ನಡೆದ ಸ್ಥಳಕ್ಕೆ ಪಾಂಡೇಶ್ವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ.