Monday, April 21, 2025
Google search engine

Homeಸ್ಥಳೀಯಸಂಪೂರ್ಣ ಅಧ್ಯಯನ ಬಳಿಕ ಮುಂದಿನ ಸಂಪುಟದಲ್ಲಿ ಬರ ತಾಲೂಕು ಘೋಷಣೆ: ಸಿಎಂ ಸಿದ್ದರಾಮಯ್ಯ

ಸಂಪೂರ್ಣ ಅಧ್ಯಯನ ಬಳಿಕ ಮುಂದಿನ ಸಂಪುಟದಲ್ಲಿ ಬರ ತಾಲೂಕು ಘೋಷಣೆ: ಸಿಎಂ ಸಿದ್ದರಾಮಯ್ಯ

ಮೈಸೂರು : ರಾಜ್ಯದಲ್ಲಿ ಬರ ಘೋಷಣೆ ಸಂಬಂಧಿಸಿದಂತೆ ಮುಂದಿನ ಸಂಪುಟದಲ್ಲಿ ಬರ ತಾಲೂಕು ಘೋಷಣೆ ಮಾಡುತ್ತೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸದ್ಯಕ್ಕೆ ೬೧ ತಾಲೂಕುಗಳು ಬರದ ಪಟ್ಟಿಗೆ ಸೇರಿವೆ. ಇನ್ನೂ ೧೩೬ ತಾಲೂಕುಗಳ ಬರ ಅಧ್ಯಯನ ನಡೆಯುತ್ತಿದೆ. ಈ ಅಧ್ಯಯನದ ವರದಿ ಸೇರಿಸಿ ತೀರ್ಮಾನ ಮಾಡುತ್ತೇವೆ ಎಂದರು. ಇನ್ನು ಒಂದು ದೇಶ ಒಂದು ಚುನಾವಣೆ ವಿಚಾರವಾಗಿ ಮಾತನಾಡಿ ಇದು ಅಸಾಧ್ಯವಾದ ಮಾತು. ಈ ಯೋಚನೆ ಅವೈಜ್ಞಾನಿಕವಾಗಿದೆ ಎಂದರು.

ಒಂದೇ ಚುನಾವಣೆ ಹೇಗೆ ಸಾಧ್ಯ. ಕೆಲವೊಂದು ರಾಜ್ಯದಲ್ಲಿ ರಾಜ್ಯಪಾಲರ ಆಡಳಿತ ಇರುತ್ತೆ. ಕೆಲವು ಕಡ ಅರ್ಧ ಸರ್ಕಾರ ನಡೆದಿರುತ್ತದೆ. ಇದು ಆಗದ ಕ್ರಮ. ಕರ್ನಾಟಕದ ಚುನಾವಣೆ ಫಲಿತಾಂಶದಿಂದ ಬಿಜೆಪಿ ಅವರು ದೃತಿಗೆಟ್ಟಿದ್ದಾರೆ. ಪ್ರಧಾನಿ ಮೋದಿ ಅವರು ಪ್ರಚಾರ ಮಾಡಿದ ಕಡೆ ಕಾಂಗ್ರೆಸ್ ಗೆದ್ದಿದೆ. ಅವರು ಬಂದು ಗಲ್ಲಿಗಲ್ಲಿಯಲ್ಲಿ ಪ್ರಚಾರ ಮಾಡಿದರು ನಮಗೆ ೧೩೫ ಸ್ಥಾನ ಬಂದಿದೆ. ಇದೇ ಒತ್ತಡದಲ್ಲಿ ಒಂದು ರಾಷ್ಟ್ರ ಒಂದು ಚುನಾವಣೆ ಎಂದು ಹೇಳುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಹಿಂದೆ ಸಿದ್ದರಾಮಯ್ಯ ಬಿಜೆಪಿಗೆ ಸೇರಲು ಯತ್ನಿಸಿದ್ದರು ಎಂಬ ಹೆಚ್‌ಡಿ ಕುಮಾರಸ್ಚಾಮಿ ಆರೋಪ ವಿಚಾರವಾಗಿ ಮಾತನಾಡಿದ ಅವರು ನನ್ನ ಹೆಣವು ಕೂಡ ಬಿಜೆಪಿಗೆ ಹೋಗಲ್ಲ. ಕೋಮುವಾದಿಗಳ ವಿರುದ್ಧ ನನ್ನ ಹೋರಾಟ ನಿರಂತರವಾಗಿ ಇರುತ್ತೆ. ಕೋಮುವಾದಿಗಳ ಜೊತೆ ನಾನು ಎಂದಿಗೂ ರಾಜಿಯಾಗುವುದಿಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಅಂದರೇ ಯಾರಾದರೂ ನಂಬುತ್ತಾರಾ? ಯಾರನ್ನೋ ಯಾವುದೋ ಸಂದರ್ಭದಲ್ಲಿ ಭೇಟಿ ಮಾಡಿರುತ್ತೇವೆ.

ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಭೇಟಿ ಮಾಡಿದ್ದೆ, ಈ ಹಿಂದೆ ಯಾವುದೊ ಸಂದರ್ಭದಲ್ಲಿ ಎಲ್‌ಕೆ ಅಡ್ವಾಣಿ ಅವರನ್ನು ಭೇಟಿ ಮಾಡಿದ್ದೆ. ಅದಕ್ಕೆಲ್ಲಾ ಈ ಅರ್ಥ ಕಟ್ಟುವುದಕ್ಕೆ ಆಗುತ್ತಾ ಎಂದು ಸಮರ್ಥಿಸಿಕೊಂಡರು.

RELATED ARTICLES
- Advertisment -
Google search engine

Most Popular