ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘದಿಂದ 2022-23ನೇ ಸಾಲಿನ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಸಾಧನೆ ಮಾಡಿದ ಹಾಲು ಉತ್ಪಾದಕರ ಮಕ್ಕಳನ್ನು ಸನ್ಮಾನಿಸಿ, ಅಭಿನಂದಿಸಲಾಯಿತು.
ಮಂಡ್ಯದ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮನ್ಮುಲ್ ಅಧ್ಯಕ್ಷ ಬಿ.ಬೋರೇಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಪ್ರತಿ ವರ್ಷದಂತೆ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನಡೆಯುತ್ತಿದೆ. ಮಕ್ಕಳನ್ನು ಪ್ರೋತ್ಸಾಹಿಸುವ ಕೆಲಸ ಒಕ್ಕೂಟದಿಂದ ಆಗುತ್ತಿದೆ. ಮಕ್ಕಳು ಒಳ್ಳೆಯ ಅಂಕ ಪಡೆದು ಪೋಷಕರಿಗೆ ಹೆಸರು ತಂದುಕೊಟ್ಟಿದ್ದಾರೆ. ಮಕ್ಕಳಲ್ಲಿ ಸಾಧನೆ ನೋಡಿ ಪೋಷಕರಿಗೆ ಖುಷಿ ತರುತ್ತದೆ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುತ್ತೆ. ಮುಂದಿನ ನಿಮ್ಮ ಭವಿಷ್ಯ ಉತ್ತಮವಾಗಿರಲಿ ಎಂದು ವಿದ್ಯಾರ್ಥಿಗಳಿದೆ ಶುಭಕೋರಿದರು.
ಕಾರ್ಯಕ್ರಮದಲ್ಲಿ ಕೆ.ಆರ್.ಪೇಟೆ ಶಾಸಕ ಹೆಚ್.ಟಿ.ಮಂಜು, ಮನ್ಮುಲ್ ಉಪಾಧ್ಯಕ್ಷ ರಘುನಂದನ್, ಮಾಜಿ ಅಧ್ಯಕ್ಷ ರಾಮಚಂದ್ರ, ಉಮ್ಮಡಳ್ಳಿ ಶಿವಪ್ಪ, ಎನ್.ಬಾಲಕೃಷ್ಣ, ಎಸ್.ಪಿ ಸ್ವಾಮಿ, ರೂಪ,ರಾಮಕೃಷ್ಣ,ರವಿ, ವ್ಯವಸ್ಥಾಪಕ ನಿರ್ದೇಶಕ ಡಾ.ಪಿ.ಆರ್.ಮಂಜೇಶ್, ಪ್ರಭಾಕರ್, ಸೇರಿ ಹಲವರು ಭಾಗಿಯಾಗಿದ್ದರು.