ಮದ್ದೂರು:ತಾಲೂಕಿನ ಕೆಸ್ತೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಹುಳಗನಹಳ್ಳಿ ಗ್ರಾಮದ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿಯಿಂದ ನಿರ್ಮಾಣಗೊಂಡಿರುವ ರಾಮನಕಟ್ಟೆಯನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಪಿ ಸಿ ಜಾಫರ್ ಪರಿಶೀಲಿಸಿದರು.
ನಂತರ ಮಾತನಾಡಿದ ಅವರು, ರಾಮನ ಕಟ್ಟೆ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಜಿಲ್ಲೆಯ ಎಲ್ಲೆಡೆ ಈ ರೀತಿ ಕೊಳಗಳನ್ನ ನಿರ್ಮಾಣ ಮಾಡಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಕದಲಿಪುರ ಗ್ರಾಮದ ಅಂಗನವಾಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಿ ಅಂಗನವಾಡಿಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸರ್ಕಾರದ ಅನುದಾನದೊಂದಿಗೆ ಕೃಷ್ಣೆಗೌಡ ಚಾರಿಟೇಬಲ್ ಟ್ರಸ್ಟ್ ಸಹಕಾರ ಪಡೆದು ಉತ್ತಮವಾದ ವಾತಾವರರ್ಣವನ್ನು ಕಲ್ಪಿಸಿದ್ದೀರಿ ಎಂದರು.
ಹನುಮಂತಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ನಡೆಸಿ ಶಾಲೆಯಲ್ಲಿ ನಡೆಯುತ್ತಿರುವ ಸ್ಮಾರ್ಟ್ ಕ್ಲಾಸ್ ಬಗ್ಗೆ ಮೆಚ್ಚುಗೆ ಸೂಚಿಸಿದರು.ಹೆಮ್ಮನಹಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಸೌಲಭ್ಯಗಳೆಲ್ಲ ಒದಗಿಸಲಾಗಿದೆ ಎಂಬುದರ ಮಾಹಿತಿ ಪಡೆದರು. ಬಳಿಕ ಗ್ರಾಮ ಪಂಚಾಯಿತಿಯ ಕಾರ್ಯವೈಖರಿ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಸ್ಥಳೀಯ ಚುನಾಯಿತ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಾರ್ವಜನಿಕರು ಜೊತೆಯಾಗಿ ಕಾರ್ಯ ನಡೆಸಿದಾಗ ಮಾತ್ರ ಇಂತಹ ಅಭಿವೃದ್ಧಿ ಮಾಡಲು ಸಾಧ್ಯವಾಗುತ್ತದೆ ಎಂದರು. ಜಿಲ್ಲಾಧಿಕಾರಿ ಡಾ. ಕುಮಾರ್,ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸೀಫ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಂದೀಶ್ ಗೌಡ , ಅಧ್ಯಕ್ಷೆ ಎಂ. ಸಿ ವೀಣಾ, ಉಪಾಧ್ಯಕ್ಷ ಅಪ್ಪಾಜಿ ತಹಸಿಲ್ದಾರ್ ನರಸಿಂಹಮೂರ್ತಿ, ಇಓ ಸಂದೀಪ್, ಪಿಡಿಓ ಲೀಲಾವತಿ ಸೇರಿದಂತೆ ಇತರರಿದ್ದರು.