Monday, April 21, 2025
Google search engine

Homeಸ್ಥಳೀಯಪರಿಸರ ಕಾಳಜಿ ಹೊಂದಲು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸಲಹೆ

ಪರಿಸರ ಕಾಳಜಿ ಹೊಂದಲು ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಸಲಹೆ

ಚಾಮರಾಜನಗರ: ವಿದ್ಯಾರ್ಥಿಗಳು ಗಿಡ ಮರಗಳನ್ನು ಪೋಷಿಸುವುದರೊಂದಿಗೆ ಪರಿಸರ ಕುರಿತ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ಸಲಹೆ ಮಾಡಿದರು.

ನಗರದ ಬಾಲಕರ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗು ಅರಣ್ಯ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಗಿಡ ಮರಗಳನ್ನು ಪೋಷಿಸಿ ಬೆಳೆಸುವ ಉದ್ದೇಶದಿಂದ ಶಾಲೆಗಳಲ್ಲಿ ಗಿಡ ನೆಡುವ ರಾಜ್ಯ ಸರ್ಕಾರದ ಮಹತ್ತರ ಸಸ್ಯ ಶ್ಯಾಮಲ ಕಾರ್ಯಕ್ರಮಕ್ಕೆ ಇಂದು ಚಾಲನೆ ನೀಡಲಾಗಿದೆ. ಜಿಲ್ಲೆಯಲ್ಲಿ 22 ಸಾವಿರ ಗಿಡಗಳನ್ನು ನೆಟ್ಟು ಬೆಳೆಸುವ ಗುರಿ ಹೊಂದಲಾಗಿದೆ. ರಾಜ್ಯದೆಲ್ಲೆಡೆ 50 ಲಕ್ಷ ಗಿಡಗಳನ್ನು ನೆಡುವ ಉದ್ದೇಶವಿದೆ ಎಂದರು.

ಮಕ್ಕಳಿಗೆ ಸಾಲು ಮರದ ತಿಮ್ಮಕ್ಕನವರ ಪರಿಸರ ಪ್ರೇಮ ಮಾದರಿಯಾಗಬೇಕು. ವಿದ್ಯಾರ್ಥಿಗಳು ಹುಟ್ಟಿದ ಹಬ್ಬದ ದಿನದಂದು ಗಿಡ ನೆಟ್ಟು ಪೋಷಿಸಬೇಕು. ಪೋಷಕರಿಗೂ ಪರಿಸರ ಕಾಳಜಿ ಮೂಡಿಸಬೇಕು. ಚಾಮರಾಜನಗರ ಜಿಲ್ಲೆ ಶೇ. 50ರಷ್ಟು ಅರಣ್ಯ ಪ್ರದೇಶ ಹೊಂದಿರುವ ಸುಂದರ ಜಿಲ್ಲೆಯಾಗಿದೆ. ಇಲ್ಲಿನ ವಿದ್ಯಾರ್ಥಿಗಳು ಇಂತಹ ಜಿಲ್ಲೆಯನ್ನು ಮತ್ತಷ್ಟು ಸುಂದರಗೊಳಿಸಲು ಆಸಕ್ತಿ ತೋರಬೇಕು ಎಂದು ಜಿಲ್ಲಾಧಿಕಾರಿ ಸಿ.ಟಿ. ಶಿಲ್ಪಾನಾಗ್ ಅವರು ತಿಳಿಸಿದರು.

ನಗರಸಭಾ ಸದಸ್ಯ ಮಹೇಶ್ ಅವರು ಮಾತನಾಡಿ ಸ್ವಾರ್ಥಕ್ಕಾಗಿ ಮರಗಳನ್ನು ಕಡಿದು ಕಾಡು ನಾಶ ಮಾಡಬಾರದು. ಪರಿಸರ ಉಳಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಸಾಲು ಮರದ ತಿಮ್ಮಕ್ಕನಂತೆ ಚಾಮರಾಜನಗರ ಜಿಲ್ಲೆಯಲ್ಲಿ ಪರಿಸರ ಪ್ರೇಮಿ ವೆಂಕಟೇಶ್ ಅವರು ತಮ್ಮ ಸ್ವಂತ ಹಣದಿಂದ ಗಿಡಗಳನ್ನು ನೆಟ್ಟು ಬೆಳೆಸಿ ಪೋಷಣೆ ಮಾಡುತ್ತಿದ್ದಾರೆ. ಇವರು ಎಲ್ಲರಿಗೂ ಮಾದರಿಯಾಗಿದ್ದಾರೆ ಎಂದರು.

ಬಿಡುವಿನ ವೇಳೆಯಲ್ಲಿ ವಿದ್ಯಾರ್ಥಿಗಳು ಗ್ರಂಥಾಲಯಕ್ಕೆ ಭೇಟಿ ಕೊಟ್ಟು ದಿನಪತ್ರಿಕೆ, ಉತ್ತಮ ಪುಸ್ತಕಗಳನ್ನು ಓದಬೇಕು. ಸಮಯದ ಸದುಪಯೋಗ ಮಾಡಿಕೊಳ್ಳಬೇಕು. ಮುಂದೆ ಸ್ಪಾರ್ಧಾತ್ಮಕ ಪರೀಕ್ಷೆಗಳನ್ನು ಯಶಸ್ವಿಯಾಗಿ ಎದುರಿಸಲು ಪೂರಕವಾಗಿರುವ ಅಧ್ಯಯನ ಚಟುವಟಿಕೆಗಳಿಗೆ ಈಗಿನಿಂದಲೇ ಒಲವು ತೋರಬೇಕು ಎಂದು ಮಹೇಶ್ ಅವರು ಸಲಹೆ ಮಾಡಿದರು.

ಬಿ.ಆರ್.ಟಿ ಅರಣ್ಯ ಸಂರಕ್ಷಣಾಧಿಕಾರಿ ದೀಪಾ. ಜೆ. ಕಂಟ್ರಾಕ್ಟರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರಾದ ಎಂ. ಕಾಶಿನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಣ್ಣೇಗೌಡ, ಶಾಲೆಯ ಪ್ರಾಂಶುಪಾಲರಾದ ಸೋಮಣ್ಣ, ಉಪ ಪ್ರಾಂಶುಪಾಲರಾದ ಮಹದೇವಸ್ವಾಮಿ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular