ಮಂಡ್ಯ: ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ನಡೆದಿದೆ.
ಅಕ್ಷಯ್ @ ಗಂಟ್ಲು (22) ಕೊಲೆಯಾದ ಯುವಕ.
ಸುಮಾರು 100 ಮೀಟರ್ ಅಟ್ಟಾಡಿಸಿರುವ ಐದು ಮಂದಿ ದುಷ್ಕರ್ಮಿಗಳ ಗುಂಪು ತಪ್ಪಿಸಿಕೊಳ್ಳಲು ಮನೆಯೊಂದರ ಕಾಂಪೌಂಡ್ ಒಳಗೆ ನುಗ್ಗಿದರೂ ಬಿಡದೆ ಮನಸೋ ಇಚ್ಛೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ಭೀಕರ ಹಲ್ಲೆಯಿಂದಾಗಿ ಅಕ್ಷಯ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಳೇ ದ್ವೇಷಕ್ಕೆ ಕೊಚ್ಚಿ ಕೊಲೆಗೈದಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಿಂದ ಮಂಡ್ಯದ ಜನರು ಬೆಚ್ಚಿಬಿದ್ದಿದ್ದಾರೆ.
ಸ್ಥಳಕ್ಕೆ ಪಶ್ಚಿಮ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹದ ಮರಣೋತ್ತರ ಪರೀಕ್ಷೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಮೃತ ಯುವಕನ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.