ಲೋಕಾಯುಕ್ತ ಅಧಿಕಾರಿಗಳು ನಡೆಸುವ ಸಭೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸದಿದ್ದರೆ ಕಠಿಣ ಕ್ರಮಕ್ಕೆ ಶಿಫಾರಸ್ಸು-ಜಿಲ್ಲಾ ಲೋಕಾಯುಕ್ತ ಡಿವೈಎಸ್‌ಪಿ ಮಹಾಂತೇಶ್
ಕೆ.ಆರ್.ನಗರ: ಲೋಕಾಯುಕ್ತ ಅಧಿಕಾರಿಗಳು ನಡೆಸುವ ಸಭೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸದಿದ್ದರೆ ಕಠಿಣ ಕ್ರಮಕ್ಕೆ ಶಿಫಾರಸ್ಸು ಮಾಡಲಾಗುತ್ತದೆ ಎಂದು ಜಿಲ್ಲಾ ಲೋಕಾಯುಕ್ತ ಡಿವೈಎಸ್‌ಪಿ ಮಹಾಂತೇಶ್ ಹೇಳಿದರು.
ಪಟ್ಟಣದ ತಾಲೂಕು ಕಚೇರಿ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಅಧಿಕಾರಿಗಳ ಸಭೆಯಲ್ಲಿ ಸಾರ್ವಜನಿಕರಿಂದ ದೂರು ಸ್ವೀಕರಿಸಿ ಮಾತನಾಡಿದ ಅವರು ತಾಲೂಕಿನ ಎಲ್ಲಾ ಗ್ರಾ.ಪಂ., ಹಾಸ್ಟೆಲ್, ಕಚೇರಿಗಳಲ್ಲಿ ಲೋಕಾಯುಕ್ತ ಬೋರ್ಡ್, ಕ್ಯಾಶ್ ಡಿಕ್ಲರೇಷನ್ ಇಡಬೇಕು ಎಂದು ಸೂಚಿಸಿದರು.
ಪ್ರತಿ ಗ್ರಾಮದಲ್ಲಿ ಸಾಕಷ್ಟು ಅಪ್ರಾಪ್ತ ಬಾಲೆಯರ ಮದುವೆ ನಡೆಯುತ್ತಿದ್ದು ಈ ಬಗ್ಗೆ ನೀವು ಏನೂ ಕ್ರಮ ಕೈಗೊಂಡಿದ್ದೀರಿ ಎಂದು ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಅಧಿಕಾರಿ ಪೂರ್ಣಿಮಾರನ್ನು ತರಾಟೆಗೆ ತೆಗೆದುಕೊಂಡರು.
ಬಿಸಿಎಂ ಇಲಾಖೆ ಹಾಸ್ಟೆಲ್‌ಗಳಲ್ಲಿ ಎಷ್ಟು ಮಕ್ಕಳು ಎಂದು ಬಿಸಿಎಂ ಇಲಾಖೆ ಅಧಿಕಾರಿ ಚಂದ್ರಕಲಾ ಅವರನ್ನು ಪ್ರಶ್ನಿಸಿದಾಗ ಸಮರ್ಪಕವಾದ ಉತ್ತರ ನೀಡದ ಅವರ ವಿರುದ್ದ ಹರಿಹಾಯ್ದ ಅವರು ಕನಿಷ್ಠ ಮಾಹಿತಿ ಇಲ್ಲದ ನೀವು ಯಾವ ರೀತಿ ಕರ್ತವ್ಯ ನಿರ್ವಹಿಸುತ್ತೀರು ಎಂದು ಛೇಡಿಸಿದರು.
ತಾಲೂಕಿನ ಹಲವಾರು ಇಲಾಖೆಗಳಲ್ಲಿ ಆರ್‌ಟಿಐ ವಿಲೇವಾರಿ ಮಾಡದ ಬಗ್ಗೆ ಅಧಿಕಾರಿಗಳ ಗಮನ ಸೆಳೆದ ಲೋಕಾಯುಕ್ತ ಡಿವೈಎಸ್‌ಪಿ ಸಾರ್ವಜನಿಕರು ಲೋಕಾಯುಕ್ತರಿಗೆ ನೇರವಾಗಿ ದೂರು ನೀಡುವುದರ ಜತೆಗೆ ವ್ಯಾಟ್ಸ್ಪ್, ಈಮೇಲ್ ಮತ್ತು ಅಂಚೆ ಮೂಲಕವು ದೂರು ಸಲ್ಲಿಸಿಬಹುದೆಂದು ಮಾಹಿತಿ ನೀಡಿದರು.
ಪಿಡಿಒ ಮತ್ತು ಸರ್ವೇ ಇಲಾಖೆಯ ಬಗ್ಗೆ ಹೆಚ್ಚು ದೂರುಗಳಿದ್ದು ನರೇಗಾ ಕಾಮಗಾರಿಯನ್ನು ಜೆಸಿಬಿ ಮೂಲಕ ಮಾಡಿ ಸತ್ತವರ ಹೆಸರಿನಲ್ಲೂ ಸಹ ಹಣ ಪಡೆದಿರುವ ಬಗ್ಗೆ ದೂರುಗಳು ಬಂದಿದ್ದು ಮುಂದೆ ಸರಿಪಡಿಸಿಕೊಂಡು ಸಾರ್ವಜನಿಕರ ಜತೆ ಸಂಯಮದಿoದ ನಡೆದುಕೊಳ್ಳುವಂತೆ ಸಲಹೆ ಹೇಳಿದರು.
ಪುರಸಭೆ ವ್ಯಾಪ್ತಿಯಲ್ಲಿ ಖಾತೆಯದೆ ಒಂದು ದೊಡ್ಡ ಸಮಸ್ಯೆಯಾಗಿದ್ದು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿ ಸುಧಾರಾಣಿ ಅವರಿಗೆ ತಿಳಿಸಿದ ಪುರಸಭೆಯ ನೌಕರರು ಸರಿಯಾಗಿ ಕೆಲಸ ಮಾಡುತ್ತಿಲ್ಲ ಈ ಬಗ್ಗೆ ದೂರುಗಳಿವೆ ಎಂದು ಗಮನ ಸೆಳೆದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲೂಕುಗಳಿಂದ ಆಗಮಿಸಿದ್ದ ಸಾರ್ವಜನಿಕರು ಲೋಕಾಯುಕ್ತರಿಗೆ ದೂರು ಸಲ್ಲಿಸಿದರು. ಲೋಕಾಯುಕ್ತ ಇನ್ಸ್ಪೆಕ್ಟರ್ ರವಿಕುಮಾರ್, ಜಯರತ್ನ, ಗ್ರೇಡ್-೨ ತಹಸೀಲ್ದಾರ್ ಬಾಲಸುಬ್ರಹ್ಮಣ್ಯಂ, ತಾ.ಪಂ.ಇಒ ಹೆಚ್.ಕೆ.ಸತೀಶ್, ತಾಲೂಕು ಆರೋಗ್ಯಾಧಿಕಾರಿ ಡಾ.ಕೆ.ರ್.ಮಹೇಂದ್ರಪ್ಪ, ಬಿಇಒ ಕೃಷ್ಣಪ್ಪ, ಸಮಾಜ ಕಲ್ಯಾಣಾಧಿಕಾರಿ ಅಶೋಕ್, ಸೆಸ್ಕಾಂನ ಎಇಇ ಅರ್ಕೆಶ್ವರಮೂರ್ತಿ, ಉಪವಲಯ ಅರಣ್ಯಾಧಿಕಾರಿ ಹರಿಪ್ರಸಾದ್, ಸಿಡಿಒ ಎಸ್.ರವಿಕುಮಾರ್,ಹಾಗೂ ತಾಲೂಕಿನ ಎಲ್ಲಾ ಗ್ರಾ.ಪಂ.ಪಿಡಿಒಗಳು ಹಾಗೂ ಎಲ್ಲಾ ಇಲಾಖೆ ಅಧಿಕಾರಿಗಳು ಹಾಜರಿದ್ದರು.