Saturday, April 19, 2025
Google search engine

Homeಬ್ರೇಕಿಂಗ್ ನ್ಯೂಸ್ರಾಜ್ಯದ 161 ತಾಲ್ಲೂಕುಗಳು ಬರ ಪೀಡಿತ: ಸರ್ಕಾರದಿಂದ ಅಧಿಕೃತ ಘೋಷಣೆ

ರಾಜ್ಯದ 161 ತಾಲ್ಲೂಕುಗಳು ಬರ ಪೀಡಿತ: ಸರ್ಕಾರದಿಂದ ಅಧಿಕೃತ ಘೋಷಣೆ

ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 161 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಈ ಎಲ್ಲಾ ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಕೈಗೊಂಡ ನಂತರ 161 ತಾಲ್ಲೂಕುಗಳನ್ನು  ತೀವ್ರ ಬರಪೀಡಿತ ಹಾಗೂ 34 ತಾಲ್ಲೂಕುಗಳನ್ನು ಸಾಧಾರಣ ಬರಪೀಡಿತ ತಾಲ್ಲೂಕು ಎಂದು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆರು ತಿಂಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೂ ಬರಪೀಡಿತ ಎಂದು ಘೋಷಿಸಲಾಗಿದೆ.

ಸಂಬಂಧ ಪಟ್ಟ ಜಿಲ್ಲಾಧಿಕಾಧಿಕಾರಿಗಳು ಬರ ನಿರ್ವಹಣೆ ಕಾರ್ಯಕ್ರಮ ಕೈಗೊಳ್ಳಲು ಸರ್ಕಾರದಿಂದ ಕಾಲಕಾಲಕ್ಕೆ ರಾಷ್ಟ್ರೀಯ ವಿಪತ್ತು ನಿರ್ವಹಣೆ ಹಾಗೂ ರಾಜ್ಯ ವಿಪತ್ತು ನಿರ್ವಹಣೆ ನಿಯಮಗಳ ಅನ್ವಯ ಮಾರ್ಗಸೂಚಿಗಳನ್ನು ನೀಡಲಾಗುವುದು ಎಂದು ಸರ್ಕಾರ ಹೊರಡಿಸಿರುವ ಅಧಿಕೃತ ಆದೇಶದಲ್ಲಿ ತಿಳಿಸಲಾಗಿದೆ.

ತೀವ್ರ ಬರಪೀಡಿತ 161 ತಾಲ್ಲೂಕುಗಳ ಪಟ್ಟಿ: ಬೆಂಗಳೂರು ನಗರ ಜಿಲ್ಲೆ  ಬೆಂಗಳೂರು ಪೂರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ, ನೆಲಮಂಗಲ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಹಾರೋಹಳ್ಳಿ  ಚಿತ್ರದುರ್ಗ ಜಿಲ್ಲೆಯ  ಚಳ್ಳಕೆರೆ, ಚಿತ್ರದುರ್ಗ, ಹಿರಿಯೂರು, ಹೊಳಲಕೆರೆ, ಹೊಸದುರ್ಗ, ಮೊಳಕಾಲ್ಮೂರು,  ದಾವಣಗೆರೆ ಜಿಲ್ಲೆಯ ಚನ್ನಗಿರಿ, ದಾವಣಗೆರೆ, ಹರಿಹರ, ಹೊನ್ನಾಳಿ, ಜಗಳೂರು, ನ್ಯಾಮತಿ,  ಮೈಸೂರು ಜಿಲ್ಲೆಯ ಎಚ್. ಡಿ. ಕೋಟೆ, ಹುಣಸೂರು, ಮೈಸೂರು, ನಂಜನಗೂಡು, ಪಿರಿಯಾಪಟ್ಟಣ, ಟಿ. ನರಸೀಪುರ, ಸರಗೂರು, ಸಾಲಿಗ್ರಾಮ, ಮಂಡ್ಯ ಜಿಲ್ಲೆಯ ಕೆಆರ್ ಪೇಟೆ, ಮದ್ದೂರು, ಮಳವಳ್ಳಿ, ಮಂಡ್ಯ, ನಾಗಮಂಗಲ, ಪಾಂಡವಪುರ, ಶ್ರೀರಂಗಪಟ್ಟಣ, ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಸಂಡೂರು, ಶಿರುಗುಪ್ಪ, ಕುರುಗೋಡು, ಕಂಪ್ಲಿ, ಕೊಪ್ಪಳ ಜಿಲ್ಲೆಯ ಗಂಗಾವತಿ, ಕೊಪ್ಪಳ, ಕುಷ್ಟಗಿ, ಯಲಬುರ್ಗಾ, ಕರಟಗಿ, ಕುಕನೂರು, ಕನಕಗಿರಿ, ರಾಯಚೂರು ಜಿಲ್ಲೆಯ ಲಿಂಗಸುಗೂರು, ಮಾನ್ವಿ, ರಾಯಚೂರು ಶಿರವಾರ.

RELATED ARTICLES
- Advertisment -
Google search engine

Most Popular