ಪಿರಿಯಾಪಟ್ಟಣ: ಪಟ್ಟಣದ ಗೋಣಿಕೊಪ್ಪ ರಸ್ತೆಯಲ್ಲಿನ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ತಾಲೂಕು ಆಡಳಿತ ವತಿಯಿಂದ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಅಂಗವಾಗಿ ತಹಶೀಲ್ದಾರ್ ಕುಂ ಇ ಅಹಮದ್ ಅವರು ಭಾರತದ ಸಂವಿಧಾನ ಪೀಠಿಕೆ ವಾಚಿಸಿದರು.
ಕನ್ನಡ ಸಾಹಿತ್ಯ ಪರಿಷತ್ ನಗರ ಘಟಕ ಅಧ್ಯಕ್ಷ ಎನ್.ಆರ್ ಕಾಂತರಾಜು ಅವರು ಮಾತನಾಡಿ ಭಾರತ ವಿಶ್ವ ಶ್ರೇಷ್ಠ ಸಂವಿಧಾನ ಹೊಂದಿದೆ, ಪ್ರತಿಯೊಬ್ಬರಿಗೂ ಸರಿಸಮಾನ ಹಕ್ಕುಗಳನ್ನು ನೀಡುವ ಉದ್ದೇಶದಿಂದ ಡಾ. ಬಿ.ಆರ್ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದರು, ಇಂದು ವಿಶ್ವವೇ ಭಾರತದ ಸಂವಿಧಾನದಲ್ಲಿನ ಅಂಶಗಳನ್ನು ಪ್ರಶಂಸಿಸುತ್ತಿವೆ ಎಂದರು.

ಈ ಸಂದರ್ಭ ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವರಾದ ಕೆ.ವೆಂಕಟೇಶ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಾಹಕಾಧಿಕಾರಿ ಡಿ.ಬಿ ಸುನಿಲ್ ಕುಮಾರ್, ಶಿರಸ್ತೆದಾರ್ ಶಕೀಲಾ ಬಾನು, ಟ್ರಿಜಾ, ಉಪ ತಹಶೀಲ್ದಾರ್ ಗಳಾದ ಶಶಿಧರ್, ಶುಭ, ಮಹೇಶ್, ಪುರಸಭಾ ಸದಸ್ಯರಾದ ಮಂಜುನಾಥ್, ರವಿ, ಇನ್ಸ್ಪೆಕ್ಟರ್ ಕೆ.ವಿ ಶ್ರೀಧರ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರ್, ಪಿಡಬ್ಲ್ಯೂಡಿ ಇಲಾಖೆ ಎ ಇಇ ವೆಂಕಟೇಶ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್, ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ.ಸೋಮಯ್ಯ, ಮೂಲ ನಿವಾಸಿ ಅಂಬೇಡ್ಕರ್ ಸಂಘದ ರಾಜ್ಯ ಸಮಿತಿ ಸದಸ್ಯ ಅಶೋಕ್ ಆಲನಹಳ್ಳಿ, ಜಿಲ್ಲಾ ಗೌರವದಕ್ಷ ಸಿ.ಎಸ್ ವೆಂಕಟೇಶ್, ತಾಲೂಕು ಗೌರವಾಧ್ಯಕ್ಷ ಚಿಕ್ಕಮಹದೇವ್, ಅಂಬೇಡ್ಕರ್ ಸ್ವಾಭಿಮಾನಿ ಸೇನೆ ರಾಜ್ಯ ಕಾರ್ಯದರ್ಶಿ ಎಂ.ಕೆ ಕಾಂತರಾಜ್, ಜಿಲ್ಲಾ ಉಸ್ತುವಾರಿ ಮಂಜು ಆಯಿತನಹಳ್ಳಿ, ಭೀಮ್ ಆರ್ಮಿ ಜಿಲ್ಲಾಧ್ಯಕ್ಷ ಗಿರೀಶ್, ತಾಲೂಕು ಅಧ್ಯಕ್ಷ ಕಾಮರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಪಟ್ಟಣದ ವಿವಿದೆಡೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಶಿಕ್ಷಕರು ತಾಲೂಕು ಆಡಳಿತ ಕಚೇರಿ ಸಿಬ್ಬಂದಿ ಇದ್ದರು.