ಮಂಡ್ಯ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನನ್ನು ಪೊಲೀಸರು ಬಂಧಿಸಿರುವ ಘಟನೆ ಮಂಡ್ಯದ ಮದ್ದೂರು ತಾಲೂಕಿನ ನಿಢಘಟ್ಟ ಗ್ರಾಮದಲ್ಲಿ ನಡೆದಿದೆ.
ನಿಡಘಟ್ಟ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಶಿವರಾಂ ಬಂಧಿತ ಆರೋಪಿ.
ವಿದ್ಯಾರ್ಥಿಗಳು, ಪೋಷಕರು ಸೇರಿದಂತೆ ದಲಿತ ಸಂಘಟನೆಗಳು ಮದ್ದೂರು ಠಾಣಾ ಪೊಲೀಸರಿಗೆ ದೂರು ನೀಡಿದ ಹಿನ್ನೆಲೆ ಆರೋಪಿ ಶಿಕ್ಷಕನನ್ನು ಬಂಧಿಸಲಾಗಿದೆ.
ಶಿಕ್ಷಕನ ಬಂಧನವಾಗುತ್ತಿದ್ದಂತೆ ಶಾಲೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಶಿಕ್ಷಕನ ಬಗ್ಗೆ ಮಾಹಿತಿ ಪಡೆದಿದ್ದಾರೆ.