Sunday, April 20, 2025
Google search engine

HomeUncategorizedಮೂವರು ಡಿಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಮುಂದೆ ಇಲ್ಲ: ಪ್ರಿಯಾಂಕ್ ಖರ್ಗೆ

ಮೂವರು ಡಿಸಿಎಂ ಆಯ್ಕೆ ವಿಚಾರ ಹೈಕಮಾಂಡ್ ಮುಂದೆ ಇಲ್ಲ: ಪ್ರಿಯಾಂಕ್ ಖರ್ಗೆ

ಕಲಬುರಗಿ: ಮೂವರು ಡಿಸಿಎಂ ಆಯ್ಕೆ ವಿಚಾರ ಕಾಂಗ್ರೆಸ್ ಹೈಕಮಾಂಡ್ ಮುಂದೆ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೂರು ಜನ ಉಪಮುಖ್ಯಮಂತ್ರಿಗಳನ್ನು ಮಾಡಬೇಕು ಎನ್ನುವ ಸಚಿವ ರಾಜಣ್ಣ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಅದು ರಾಜಣ್ಣ ಅವರ ವೈಯಕ್ತಿಕ ಅಭಿಪ್ರಾಯವಾಗಿದೆ. ಎಲ್ಲರಿಗೂ ಹೈಕಮಾಂಡ್ ಮುಂದೆ ತಮ್ಮ ಅಭಿಪ್ರಾಯ ಹೇಳಲು ಸ್ವಾತಂತ್ರ್ಯವಿದೆ. ಹೀಗಾಗಿ, ಮೂವರು ಡಿಸಿಎಂ ಅಂತಾದರೂ ಹೇಳಲಿ ಐವರು ಡಿಸಿಎಂ ಅಂತಾದರೂ ಹೇಳಲಿ, ಅದು ಅವರಿಗೆ ಬಿಟ್ಟದ್ದು. ಆದರೆ ನನಗೆ ಗೊತ್ತಿರುವ ಮಾಹಿತಿಯ ಪ್ರಕಾರ ಹೈಕಮಾಂಡ್ ಮುಂದೆ ಇಂತಹ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರಿಯ ವಿವಿಯಲ್ಲಿ ವಿವೇಕಾನಂದರಿಗೆ ಅವಮಾನ ವಿಚಾರ ಕುರಿತು ಮಾತನಾಡಿ, ಕೇಂದ್ರಿಯ ವಿವಿ ವಿದ್ಯಾಭ್ಯಾಸ ಬಿಟ್ಟು ಎಲ್ಲಾ ಮಾಡ್ತಿದೆ. ನಾನು ಆದಷ್ಟು ಬೇಗ ವಿವಿಗೆ ಭೇಟಿ ನೀಡ್ತೇನೆ. ಸೆಂಟ್ರಲ್ ವಿವಿಯಲ್ಲಿ ಕಲಬುರಗಿಗಿಂತ ಹೆಚ್ಚು ರಾಜಕೀಯ ನಡೆದಿದೆ. ವಿವಿಯವರು ಕೇಂದ್ರಕ್ಕೆ ಸಂಬಂಧ ಇದ್ದಿವಿ ಎಂದು ಅಂದುಕೊಂಡಿರಬಹುದು. ಆದರೆ ರಾಜ್ಯ ಸರ್ಕಾರ ಅದಕ್ಕೆ ಸಾಕಷ್ಟು ಸೌಲಭ್ಯಗಳನ್ನು ಕೊಟ್ಟಿದೆ. ನಾನು ಒಂದು ಸಾರಿ ಹೇಳಿದ್ದೆ, ಆದರೂ ತಿದ್ದುಕೊಂಡಿಲ್ಲ ಎಂದರು.

ಇನ್ನೊಂದು ಸಾರಿ ತಿಳಿ ಹೇಳ್ತೆನೆ. ಸೆಂಟ್ರಲ್ ವಿವಿಯಲ್ಲಿ ಆರ್‌ಎಸ್‌ಎಸ್ ಕಚೇರಿ ತೆರಯೋದಕ್ಕೆ ಬಿಡೋದಿಲ್ಲ. ನಮ್ಮ ಮಕ್ಕಳಿಗೆ ಒಳ್ಳೆ ವಿದ್ಯಾಭ್ಯಾಸ ಕೊಡೋದಕ್ಕೆ ವಿವಿ ತರಿಸಿರೋದು ಹೊರತು ಆರ್‌ಎಸ್‌ಎಸ್ ಕಚೇರಿ ಸಲುವಾಗಿ ಅಲ್ಲ. ಯಾವ್ಯಾವ ಉದ್ದೇಶಗಳಿಗೆ ಸಂಸ್ಥೆ ತೆರೆದಿದೆ. ಅದನ್ನು ಪಾಲನೆ ಮಾಡಲಿ. ಪೊಲೀಸ್ ಠಾಣೆಯಲ್ಲಿ ಕೇಸರಿ ಶಾಲು ಹಾಕಿಕೊಂಡಿದ್ದಾರೆ. ಶಾಖೆಗಳು ಕಳೆದ ಒಂಭತ್ತು ವರ್ಷಗಳಲ್ಲಿ ಬಹಳಷ್ಟು ತೆರೆದಿವೆ. ಆರ್‌ಎಸ್‌ಎಸ್ ತತ್ವ ನಂಬಿ ಯಾರು ಉದ್ಧಾರ ಆಗಿದ್ದಾರೆ?. ಆರ್‌ಎಸ್‌ಎಸ್ ತತ್ವದ ಬಗ್ಗೆ ಮಾತಾಡೋದಕ್ಕೆ ನಾನೇನು ಹೇದರೋದಿಲ್ಲ. ಆರ್‌ಎಸ್‌ಎಸ್ ತತ್ವದಿಂದ ದೇಶ ಉದ್ಧಾರ ಆಗೋದಿಲ್ಲ ಎಂದು ಸಚಿವ ಖರ್ಗೆ ವಾಗ್ದಾಳಿ ನಡೆಸಿದರು.

RELATED ARTICLES
- Advertisment -
Google search engine

Most Popular