ಶ್ರೀರಂಗಪಟ್ಟಣ : ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವಾಗ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣದ ಬಳಿ ಹಿಂಬದಿಯಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರು ಹೊತ್ತಿ ಉರಿದಿದೆ ಕಾರಿನಲ್ಲಿದ್ದವರನ್ನು ಪೊಲೀಸರು ಹಾಗೂ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಆನೇಕಲ್ ಮೂಲದ ಕಿಶೋರ್ ಬಾಬು(೪೭) ಸಾವುನ್ನಪ್ಪಿದ್ದು, ನಾಲ್ವರು ಗಂಭೀರ ಗಾಯಗೊಂಡಿದ್ದು ಮೈಸೂರು ಖಾಸಗಿ ಆಸ್ಪತ್ರೆಗೆ ಗಾಯಗಳನ್ನು ಅಗ್ನಿ ಶಾಮಕ ಸಿಬ್ಬಂದಿಗಳು ದಾಖಲಿಸಿದ್ದಾರೆ. ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.
