Saturday, April 19, 2025
Google search engine

Homeಅಪರಾಧಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿ ಬಂಧನ

ಮಂಗಳೂರು: ಬೈಕ್ ಕಳ್ಳತನ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಮೋಟರ್ ಸೈಕಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಕೊಡಗು ಸೋಮವಾರಪೇಟೆ ಬಸವನಹಳ್ಳಿ ನಿವಾಸಿಯಾದ ಆರೋಪಿ ಸುಬ್ರಮಣಿ (೨೬)ಎಂಬಾತನನ್ನು ಬಂಧಿಸಲಾಗಿದೆ.

ಪ್ರಕರಣ ವರದಿಯಾದ ಕೆಲವೇ ಗಂಟೆಗಳಲ್ಲಿ ಸುಳ್ಯ ತಾಲೂಕು ಆಲಟ್ಟಿ ಗ್ರಾಮದ ಸರಳಿಪಂಜ ಎಂಬಲ್ಲಿ ಪತ್ತೆ ಮಾಡಿ ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಯ್ತು. ಆರೋಪಿತನು ಈ ಹಿಂದೆ ನಾಪೋಕ್ಲು ಪೊಲೀಸ್ ಠಾಣೆಯಲ್ಲಿ ಹಾಗೂ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ. ಅಲ್ಲದೇ ಆರೋಪಿತನು ಇತ್ತೀಚೆಗೆ ಕೆಲ ದಿನಗಳ ಹಿಂದೆ ಸುಳ್ಯ ಬಸ್ ನಿಲ್ದಾಣದಲ್ಲಿ ಬಿದ್ದಿದ್ದ ವ್ಯಕ್ತಿಯೊಬ್ಬರ ಪರ್ಸ್ ತೆಗೆದುಕೊಂಡು ಹೋಗಿದ್ದು ತನಿಖೆ ವೇಳೆ ಬಯಲಾಗಿದೆ.

RELATED ARTICLES
- Advertisment -
Google search engine

Most Popular