ಮಳವಳ್ಳಿ: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪ ಬೆಂಗಳೂರಿನಿಂದ ಶಿವನಸಮುದ್ರಕ್ಕೆ ತೆರಳುತ್ತಿದ್ದ ಆಟೋಗೆ ಕಾರ ಡಿಕ್ಕಿ ಹೊಡೆದ ಪರಿಣಾಮ ಹಳ್ಳಕ್ಕೆ ಉರುಳಿದ ಕಾರು, ಆಟೋದಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯವಾಗಿದ್ದು, ಗಾಯಾಳುಗಳನ್ನ ಕೆ.ಎಂ.ದೊಡ್ಡಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕೆ.ಎಂ.ದೊಡ್ಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
