ಹನೂರು : ಗಣೇಶ ಚತುರ್ಥಿಯ ಅಂಗವಾಗಿ ಹನೂರಿನಲ್ಲಿ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇವಾಲಯದ ಸಮೀಪ ವಿಘ್ನೇಶ್ವರನ ಪ್ರತಿಷ್ಠಾಪನೆ ಶಾಸಕ ಮಂಜುನಾಥ್ ಭಾಗಿ.
ಇಂದು ನಾಡಿನಾದ್ಯಂತ ಸಡಗರ ಸಂಭ್ರಮದ ಸ್ವರ್ಣಗೌರಿ ಹಾಗೂ ಗಣೇಶ ಚತುರ್ಥಿ ಆಚರಣೆ ಅಂಗವಾಗಿ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದರಂತೆ ಹನೂರು ಪಟ್ಟಣದ ಬೆಟ್ಟಳ್ಳಿ ಮಾರಮ್ಮ ದೇವಾಲಯದಸಮೀಪ ಸುಮಾರು ೬ಅಡಿ ಎತ್ತರದ ಮಹಾಗಣಪತಿ ಪ್ರತಿಷ್ಠಾಪಿಸಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ವೇಳೆ ಕ್ಷೇತ್ರದ ಶಾಸಕ ಮಂಜುನಾಥ್ ಸೇರಿದಂತೆ ವಿವಿಧ ಗಣ್ಯರು ಸಹ ಭಾಗಿಯಾಗಿದ್ದರು.