ನವದೆಹಲಿ: ಕಾವೇರಿ ನದಿ ನೀರಿನ ವಿಚಾರದಲ್ಲಿ ರೈತರಿಂದ ಹೋರಾಟದ ಬೆನ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶಿಖಾವತ್ ರನ್ನು ಲೋಕಸಭೆ ವಿಶೇಷ ಅಧಿವೇಶನದಲ್ಲಿ ಪಾಲ್ಗೊಳ್ಳುವ ಸಲುವಾಗಿ ನವದೆಹಲಿಗೆ ತೆರಳಿದ್ದ ವೇಳೆ ಭೇಟಿ ಮಾಡಿದರು.
ಕರ್ನಾಟಕ ರಾಜ್ಯದಲ್ಲಿ ಮತ್ತು ಮಂಡ್ಯ ಜಿಲ್ಲೆಯಲ್ಲಿ ಮಳೆಯ ತೀವ್ರ ಕೊರತೆಯಿಂದ ಬರೆದ ಛಾಯೆ ಆವರಿಸಿದೆ. ಕರ್ನಾಟಕದಲ್ಲಿನ ವಾಸ್ತವ ಪರಿಸ್ಥಿತಿ , ರೈತರು ಕುಡಿಯುವ ನೀರಿನ ಸಂಕಷ್ಟದ ಬಗ್ಗೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟಿದ್ದು , ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಮುಂದಿನ ಒಂದು ವಾರದೊಳಗೆ ಬರ ಅಧ್ಯಯನ ನಡೆಸಲು ಕೇಂದ್ರದಿಂದ ತಂಡ ರಚಿಸಲಾಗಿದೆ. ಬರಪೀಡಿತ ಪ್ರದೇಶಗಳಿಗೆ ಕಳುಹಿಸಿ ಕೊಡುವುದಾಗಿ ಆಶ್ವಾಸನೆ ನೀಡಿರುತ್ತಾರೆ ಎಂದರು.
ಕರ್ನಾಟಕ ರಾಜ್ಯದಲ್ಲಿ ಕುಡಿಯುವ ನೀರು ಕೊರತೆ ಸಂಬಂಧಿಸಿದಂತೆ ರೈತರ ಪರವಾಗಿ ನಿಲ್ಲುವ ಭರವಸೆ ನೀಡಿದ್ದು, ತಂಡವು ಬರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಅಧ್ಯಯನ ನಡೆಸಿ ವರದಿ ಸಲ್ಲಿಸಲಿದ್ದಾರೆ ಹಾಗೂ ಮಂಡ್ಯ ಜಿಲ್ಲೆಗೆ ಹಾಗೂ ರಾಜ್ಯಕ್ಕೆ ಬಿಡುಗಡೆ ಮಾಡಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ ಎಂದು ಕೇಂದ್ರ ಸಚಿವರನ್ನು ಭೇಟಿ ಮಾಡಿದ ಸಂದರ್ಭದಲ್ಲಿ ಕಾವೇರಿ ವಿಚಾರ ಚರ್ಚಿಸಿರುವ ಬಗ್ಗೆ ಸಂಸದೆ ಸುಮಲತಾ ಅಂಬರೀಶ್ ಮಾಹಿತಿ ನೀಡಿದ್ದಾರೆ.