ಮಂಡ್ಯ: ಜಿಲ್ಲೆಯಲ್ಲಿ ಕಾವೇರಿ ಹೋರಾಟ ಮುಂದುವರೆದಿದ್ದು, ಕನ್ನಡ ಸೇನೆ, ಜಯ ಕರ್ನಾಟಕ ಜನಪರ ವೇದಿಕೆಯಿಂದ ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಅಸಮಧಾನ ವ್ಯಕ್ತಪಡಿಸಿದ್ದಾರೆ.
ಸಂಜಯ ವೃತ್ತದ ಹೆದ್ದಾರಿಯಲ್ಲೇ ಧರಣಿ ಕುಳಿತ ಪ್ರತಿಭಟನಾಕಾರರು, ಪ್ರಾಧಿಕಾರ, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹೆದ್ದಾರಿಯಲ್ಲೇ ಮಲಗಿ ಹೋರಾಟಗಾರರು ತಮ್ಮ ಕೋಪವನ್ನು ಹೊರಹಾಕಿದ್ದಾರೆ.
ಪ್ರತಿಭಟನಾಕಾರರಿಂದ ಹೆದ್ದಾರಿ ತಡೆ ಹಿನ್ನೆಲೆ ಹೆದ್ದಾರಿಯ ಎರಡೂ ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.