ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಬೆಂಬಲ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ಪ್ರಾರಂಭವಾಗಿದೆ.
ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ ಅವರು, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪರವಾಗಿ, ನಾನು ನಾರಿ ಶಕ್ತಿ ವಂದನ್ ಅಧಿನಿಯಮ್ 2023 ರ ಬೆಂಬಲಕ್ಕೆ ನಿಂತಿದ್ದೇನೆ. ಇದರಿಂದ ಒಬಿಸಿ, ಎಸ್ ಸಿ, ಎಸ್ ಟಿ ಮಹಿಳೆಯರಿಗೆ ನ್ಯಾಯ ಸಿಗಲಿದೆ ಎಂದರು.
ರಾಜೀವ್ ಗಾಂಧಿ ಕಂಡಿದ್ದ ಕನಸು ಪೂರ್ಣಗೊಂಡಿದೆ. ಈ ಬಿಲ್ ಗಾಗಿ 13 ವರ್ಷಗಳಿಂದ ಮಹಿಳೆಯರು ಕಾಯುತ್ತಿದ್ದರು. ಎಸ್ ಸಿ, ಎಸ್ ಟಿ, ಒಬಿಸಿಗಳಿಗೆ ಉಪ ಕೋಟಾದೊಂದಿಗೆ ಮಹಿಳಾ ಕೋಟಾ ಮಸೂದೆಯನ್ನು ಕೂಡಲೇ ಜಾರಿಗೊಳಿಸಬೇಕು ಎಂದರು.
ಹಾಗೆಯೇ ಕೂಡಲೇ ಕೇಂದ್ರ ಸರ್ಕಾರ ಜನಗಣತಿ ಆರಂಭಿಸಬೇಕು ಎಂದು ಸೋನಿಯಾ ಗಾಂಧಿ ಆಗ್ರಹಿಸಿದರು.