ಮಂಡ್ಯ: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಅನ್ನದಾತರು ರೊಚ್ಚಿಗೆದ್ದಿದ್ದು, ಕಾವೇರಿ ಕಿಚ್ಚು ಭುಗಿಲೆದ್ದಿದೆ.
ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯಿಂದ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರೈತ ಹಿತ ರಕ್ಷಣಾ ಸಮಿತಿಗೆ ವಿವಿಧ ಸಂಘಟನೆಗಳ ಸಾಥ್ ನೀಡಿವೆ.