Sunday, April 20, 2025
Google search engine

Homeರಾಜ್ಯಸುದ್ದಿಜಾಲಬಾಲ್ಯ ವಿವಾಹದಂತಹ ಸಾಮಾಜಿಕ ರೋಗ ನಿವಾರಣೆಗೆ ಸಾಮಾಜಿಕ ಕಳಕಳಿ ಅಗತ್ಯ:ನ್ಯಾಯ. ಬಿ ಎಸ್ ರೇಖಾ

ಬಾಲ್ಯ ವಿವಾಹದಂತಹ ಸಾಮಾಜಿಕ ರೋಗ ನಿವಾರಣೆಗೆ ಸಾಮಾಜಿಕ ಕಳಕಳಿ ಅಗತ್ಯ:ನ್ಯಾಯ. ಬಿ ಎಸ್ ರೇಖಾ

ಚಿತ್ರದುರ್ಗ: ದೇಶದಲ್ಲಿ ಬಾಲ್ಯ ವಿವಾಹದಂತಹ ಸಾಮಾಜಿಕ ಸಮಸ್ಯೆಗಳನ್ನು ಹೋಗಲಾಡಿಸಲು ಸಾಮಾಜಿಕ ಕಳಕಳಿ ಹಾಗೂ ಇಲಾಖೆಗಳ ನಡುವೆ ಸಮನ್ವಯತೆ ಅಗತ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಎಸ್.ರೇಖಾ ಹೇಳಿದರು.

ಹಿರಿಯೂರಿನ ವಾಲ್ಮೀಕಿ ಸಮುದಾಯ ಭವನದಲ್ಲಿ ಬಾಲ್ಯ ವಿವಾಹ ಅಧಿಕಾರಿ, ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಹಿರಿಯೂರಿನ ವಕೀಲರ ಸಂಘಗಳ ಸಂಯುಕ್ತಾಶ್ರಯದಲ್ಲಿ ಬಾಲ್ಯ ವಿವಾಹದ ಜಂಟಿ ಸಂಘಗಳ ದಿನಾಚರಣೆ ಕಾಯಿದೆ ಮತ್ತು ಬಾಲ್ಯವಿವಾಹ ನಿಷೇಧ ಕಾಯಿದೆ ಕಾರ್ಯಾಗಾರ ಹಾಗೂ ರಾಷ್ಟ್ರೀಯ ಭಾವೈಕ್ಯ ಅಭಿಯಾನದಡಿ ಪ್ಯಾಶನ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಪಾಲಕರು ಜಾಗೃತರಾಗಬೇಕು, ಹೆಣ್ಣು ಮಕ್ಕಳು ಚಿಕ್ಕವಯಸ್ಸಿನಲ್ಲಿ ಮದುವೆ ಮಾಡಿ ಕೈತೊಳೆದುಕೊಳ್ಳಬಾರದು, ಪಾಲಕರು ಮಕ್ಕಳ ಬಾಲ್ಯವನ್ನು ಹಾಳು ಮಾಡಬಾರದು. ಅವರಿಗೆ ಉತ್ತಮ ಶಿಕ್ಷಣ ನೀಡಬೇಕು. ಸಾಧನೆಗೆ ಅವಕಾಶ ನೀಡಬೇಕು. ಅವರು ಪ್ರಬುದ್ಧರಾಗುವವರೆಗೆ ಕಾಯಬೇಕು. ನಂತರ ಮದುವೆಯಾಗಬೇಕು ಎಂದು ನ್ಯಾಯಾಧೀಶ ಬಿ. ಎಸ್.ರೇಖಾ ಅವರು ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ವಿಜಯ್ ಮಾತನಾಡಿ, ಜಿಲ್ಲೆಯಲ್ಲಿ ಬಾಲ್ಯವಿವಾಹಗಳನ್ನು ತಡೆಗಟ್ಟಬೇಕು, ಬಾಲ್ಯವಿವಾಹ ನಡೆಯುತ್ತಿರುವುದು ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಗಮನಸೆಳೆಯುತ್ತದೆ. ಈ ಬಗ್ಗೆ ಅಧಿಕಾರಿಗಳು ಸ್ವಯಂ ಜಾಗೃತಿ ವಹಿಸಬೇಕು. ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಲಭಿಸಿದಂತೆಯೇ ಬಾಲ್ಯ ವಿವಾಹ ತಡೆಗೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳು ಪರಿಶ್ರಮದಿಂದ ಕೆಲಸ ಮಾಡಬೇಕು.

ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜೆ.ಕುಮಾರಸ್ವಾಮಿ ಮಾತನಾಡಿ, ಪೆಸಿಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನಿನಲ್ಲಿ ಅತ್ಯಂತ ಕಠಿಣ ಶಿಕ್ಷೆ ಇದೆ. ಇಡೀ ಸಮಾಜದ ಪ್ರತಿಯೊಬ್ಬರೂ ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕು. ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು ಪ್ರತಿಯೊಬ್ಬರ ಕರ್ತವ್ಯ. ಪೆಜಿಕ್ಸೋ ಕಾಯಿದೆ ಮಾಡಿ ಬಾಲ್ಯವಿವಾಹ ತಡೆಗೆ ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯೂರಿನ ಹಿರಿಯ ಸಿವಿಲ್ ನ್ಯಾಯಾಧೀಶ ಮಹಮ್ಮದ್ ಮೊಯಿನುದ್ದೀನ್, ಪ್ರಧಾನ ಸಿವಿಲ್ ಹಾಗೂ ಜೆ. ಎಂ.ಎಫ್.ಸಿ.ಶಿಲ್ಪಾ ತಿಮ್ಮಾಪುರ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಕೆ.ಟಿ.ತಿಪ್ಪೇಸ್ವಾಮಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಡಾ.ಆರ್.ರಂಗೇನಹಳ್ಳಿ ರಾಮಚಂದ್ರಪ್ಪ, ಹಿರಿಯೂರು ವಕೀಲರ ಸಂಘದ ಉಪಾಧ್ಯಕ್ಷ ಪ್ರಭಾಕರ್. ಬೀನಾರಾಣಿ, ಕಾರ್ಯದರ್ಶಿ ಜಿ.ಚಿತ್ರಲಿಂಗಪ್ಪ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ.ರವಿಶಂಕರರೆಡ್ಡಿ, ಉಪಾಧೀಕ್ಷಕಿ ಎಸ್.ಚೈತ್ರಾ, ಬಾಲ ನ್ಯಾಯ ಮಂಡಳಿ ಸದಸ್ಯೆ ಸುಮನಾ ಎಸ್.ಅಂಗಡಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿ.ಸವಿತಾ ಮತ್ತಿತರರು ಇದ್ದರು. ಬೆಂಗಳೂರಿನ ಪೆಜೆಲಿಸ್ ತರಬೇತಿ ಕಛೇರಿಯ ತರಬೇತುದಾರ ಸಿ. ಜೆ.ಲೋಹಿತ್ ಉಪನ್ಯಾಸ ನೀಡಿದರು.

RELATED ARTICLES
- Advertisment -
Google search engine

Most Popular