ಮಂಡ್ಯ: ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ಹಿನ್ನೆಲೆ ಈ ತೀರ್ಪು ರೈತರ ಪಾಲಿಗೆ ಮರಣ ಶಾಸನವಾಗಿದೆ. ಈ ತೀರ್ಪು ಖಂಡಿಸಿ ಸೆಪ್ಟೆಂಬರ್ 23(ಶನಿವಾರ) ರಂದು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ .ಇಂದಿನ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದ್ದು ಈ ಸಂಬಂಧ ನಾಳೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಹೇಳಿದೆ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು ಸಂಘಟನೆಗಳ ಮುಖಂಡರ ಜೊತೆ ಸಭೆ ನಡೆಯಲಿದ್ದು ಸಮಾಲೋಚನೆ ನಡೆಸಲಾಗುವುದು ಎಂದು ಸಮಿತಿಯು ತಿಳಿಸಿದೆ .