ಮಂಡ್ಯ: ತಮಿಳುನಾಡಿಗೆ ನೀರು ಹರಿಸಲು ಸುಪ್ರೀಂ ಆದೇಶ ಹಿನ್ನಲೆ ಸಕ್ಕರೆನಾಡು ಮಂಡ್ಯದಲ್ಲಿ ಅನ್ನದಾತರ ಆಕ್ರೋಶ ಭುಗಿಲೆದ್ದಿದ್ದು, ಇಂದು ಕೂಡ ಜಿಲ್ಲೆಯ ಹಲವೆಡೆ ಸುಪ್ರೀಂ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತದೆ.
ರೈತರ ಹೋರಾಟಕ್ಕೆ ಇಂದು ನಟ ಅಭಿಷೇಕ್ ಅಂಬರೀಶ್ ಸಾಥ್ ನೀಡಲಿದ್ದು, ಬೆಳಿಗ್ಗೆ 11 ಗಂಟೆಗೆ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಹಿತರಕ್ಷಣಾ ವೇದಿಕೆ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಭಾಗಿಯಾಗಿ ಹೋರಾಟಕ್ಕೆ ಕೈ ಜೋಡಿಸಲಿದ್ದಾರೆ.
ಕಾವೇರಿ ಸಂಬಂಧ ಕೇಂದ್ರದ ಮಧ್ಯಸ್ಥಿಕೆಗೆ ಆಗ್ರಹಿಸಿ ಮಂಡ್ಯ ಜಿಲ್ಲೆಯ 7 ತಾಲೂಕಿನಲ್ಲಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.
ಜಿಲ್ಲಾ ರೈತ ಹಿತರಕ್ಷಣಾ ಸಮತಿಯಿಂದ ಕರೆ ನೀಡಿರುವ ನಾಳಿನ ಮಂಡ್ಯ ಬಂದ್ ಸಂಬಂಧ ಇಂದು ಮಹತ್ವದ ಸಭೆ ಕರೆಯಲಾಗಿದೆ.