Saturday, April 19, 2025
Google search engine

Homeರಾಜ್ಯಬರಿದಾಗಿರುವ ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ: ಮಹೇಶ್ ಜೋಶಿ

ಬರಿದಾಗಿರುವ ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ: ಮಹೇಶ್ ಜೋಶಿ

ಮಂಡ್ಯ:  ಕಾವೇರಿಗಾಗಿ ನಿರಂತರವಾಗಿ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ತಿರುವ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿಯ ಧರಣಿಗೆ ಕನ್ನಡ ಸಾಹಿತ್ಯ ಪರಿಷತ್ ರಾಜ್ಯಾಧ್ಯಕ್ಷ ಮಹೇಶ್ ಜೋಶಿ ಸೇರಿದಂತೆ ಜಿಲ್ಲೆಯ ಸಾಹಿತಿಗಳು ಸಾಥ್ ನೀಡಿದ್ದಾರೆ.

ಕರ್ನಾಟಕ ಸಂಘದ ಅಧ್ಯಕ್ಷ ಜಯಪ್ರಕಾಶ್ ಗೌಡ, ವಿವಿಧ ಕನ್ನಡಪರ ಸಂಘಟನೆಗಳ ಸಾಥ್.

ಕಸಾಪ ರಾಜ್ಯಾಧ್ಯಕ್ಷ ಡಾ. ಮಹೇಶ್ ಜೋಶಿ ಮಾತನಾಡಿ, ಬರಿದಾಗಿರುವ ಕಾವೇರಿಗೆ ಬರದ ಶಾಸನ ಕೊಟ್ಟಿದ್ದಾರೆ. ಮಾರಣಾಂತಿಕ ತೀರ್ಪು ಕೊಟ್ಟಿದ್ದಾರೆ. ಕಾವೇರಿ ಕೊಳ್ಳದ ಡ್ಯಾಂಗಳು ಬರಿದಾಗುತ್ತಿವೆ. ಮಳೆ ಬರದಿದ್ದರೇ ಬರ ಬರಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ತಮಿಳುನಾಡಿನಲ್ಲಿ ನಮ್ಮ ರಾಜ್ಯಕ್ಕಿಂತ ಅಂತರ್ ಜಲದ ಮಟ್ಟದ ಚೆನ್ನಾಗಿ ಇದೆ. ಇಂತಹ ಪರಿಸ್ಥಿತಿಯಲ್ಲಿ ನೀರು ಬಿಡಿ ಎನ್ನುತ್ತಿದ್ದಾರೆ. ಕರ್ನಾಟಕಕ್ಕೆ ಬಂದಿರುವ ದುಸ್ಥಿತಿ ಬೇರೆ ಯಾವ ರಾಜ್ಯಕ್ಕೂ ಇಲ್ಲ. ಸುಪ್ರೀಂ ಕೋರ್ಟ್ ನಲ್ಲಿ ಸಮರ್ಪಕ ವಾದ ಮಂಡನೆ ಆಗಿಲ್ಲ. ಪ್ರಧಾನಮಂತ್ರಿಯನ್ನ ಭೇಟಿ ಮಾಡಿ ಮನವೊಲಿಸಲು ರಾಜ್ಯ ಸರ್ಕಾರಕ್ಕೆ ಡಾ. ಮಹೇಶ್ ಜೋಶಿ ಮನವಿ ಮಾಡಿದ್ದಾರೆ.

ಬರಪ್ರದೇಶಕ್ಕೆ ಹೆಚ್ಚಿನ ಹಣವನ್ನ ವಿನಿಯೋಗ ಮಾಡಿ, ದಸರಾ, ಹಂಪಿ ಸೇರಿದಂತೆ ಎಲ್ಲಾ ಉತ್ಸವಗಳನ್ನು ಸರಳವಾಗಿ ಆಚರಿಸಿ ಎಂದು ಮನವಿ ಮಾಡಿದರು.

RELATED ARTICLES
- Advertisment -
Google search engine

Most Popular