ಮೈಸೂರು: ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಗರಾಭಿವೃದ್ಧಿ ವಿಚಾರವಾಗಿ ಪರಿಶೀಲನಾ ಸಭೆ ನಡೆಸುತ್ತಿರುವ ಸಚಿವ ಭೈರತಿ ಸುರೇಶ್ ಅವರಿಗೆ ರೈತರು ಮುತ್ತಿಗೆ ಹಾಕಲು ಯತ್ನಿಸಿರುವ ಘಟನೆ ನಡೆದಿದೆ.
ಭೈರತಿ ಸುರೇಶ್‌ಗೆ ಮುತ್ತಿಗೆ ಹಾಕಲು ಯತ್ನಿಸಿದ ರೈತರನ್ನು ಮುಖ್ಯದ್ವಾರದ ಬಳಿ ಪೊಲೀಸರು ತಡೆದಿದ್ದು, ಪೊಲೀಸರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದಕ್ಕೂ ಮುನ್ನ ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಖಾಲಿ ಮಡಿಕೆ ಹಿಡಿದು ರೈತರು ಪ್ರತಿಭಟಿಸಿ, ಕೇಂದ್ರ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ.
ಜಿಲ್ಲಾ ಪಂಚಾಯತ್ ಗೇಟ್ ಹತ್ತಲು ಮುಂದಾದ ರೈತನನ್ನು ಪೊಲೀಸರು ಕೆಳಗಿಳಿಸಿದ್ದು, ಜಿಲ್ಲಾ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದ ರೈತರನ್ನು ಎಳೆದೊಯ್ದು ವ್ಯಾನ್ ಗೆ ತುಂಬಿದ್ದಾರೆ.