ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆಗೆ ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ಮಂಡ್ಯದಲ್ಲಿ ಕಾವೇರಿ ಹೋರಾಟ ತೀವ್ರವಾಗಿದ್ದು, ಕರ್ನಾಟಕ ರಕ್ಷಣೆ ವೇದಿಕೆಯಿಂದ ಅಂಚೆ ಕಚೇರಿಗೆ ಮುತ್ತಿಗೆ ಹಾಕಲಾಗಿದೆ.
ಅಂಚೆ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.
ರಾಜ್ಯ ಸರ್ಕಾರ ಪ್ರಾಧಿಕಾರದ ಆದೇಶ ಪಾಲನೆ ಮಾಡಬಾರದು. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು. ಒಂದು ವೇಳೆ ನೀರು ಬಿಟ್ಟರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.
ಬಳಿಕ ಕರವೇ ಕಾರ್ಯಕರ್ತರು ಡಿಸಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.