Sunday, April 20, 2025
Google search engine

Homeರಾಜ್ಯಸುಪ್ರೀಂ ತೀರ್ಪಿಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಪಕ್ಷದಿಂದ ಪ್ರತಿಭಟನೆ

ಸುಪ್ರೀಂ ತೀರ್ಪಿಗೆ ವಿರೋಧ: ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಪಕ್ಷದಿಂದ ಪ್ರತಿಭಟನೆ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಮೈಸೂರು ಬ್ಯಾಂಕ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಬಿಜೆಪಿ ಪಕ್ಷದ ವತಿಯಿಂದ ರಾಜ್ಯ ಸರ್ಕಾರದ  ವಿರುದ್ಧ ಪ್ರತಿಭಟನೆ ನಡೆಸಿ  ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವರು ಹಾಗೂ ಸ್ಥಳೀಯ ಶಾಸಕರಾದ ಕೆ ಗೋಪಾಲಯ್ಯ ರವರು ಪಾಲ್ಗೊಂಡು ಸುಪ್ರೀಂ ಕೋರ್ಟ್ ತೀರ್ಪು ಕರ್ನಾಟಕಕ್ಕೆ ಮತ್ತೊಮ್ಮೆ ಹಿನ್ನೆಡೆ ಉಂಟಾಗಲು ಕಾರಣವಾಗಿದೆ.ಇದನ್ನ ಘನ ನ್ಯಾಯಾಲಯ ಮತ್ತೊಮ್ಮೆ ವಾಸ್ತವಾಂಶ ಪರಿಶೀಲನೆ ಮಾಡ್ಬೇಕು ಎಂದು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.

ಜೊತೆಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಸಮರ್ಥ ರೀತಿಯಲ್ಲಿ ವಾದ ಮಂಡಿಸಬೇಕು ಎಂದು ಗೋಪಾಲಯ್ಯ ಹೇಳಿದರು.

ಈ ಪ್ರತಿಭಟನೆಯಲ್ಲಿ  ಮಾಜಿ ಸಚಿವರಾದ ಗೋವಿಂದ ಕಾರಜೋಳ , ಗೋಪಾಲಯ್ಯ, ಅಶ್ವಥ್ ನಾರಾಯಣ, ಪಿಸಿ ಮೋಹನ್, ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ,ವಕ್ತಾರ ಅಶ್ವಥ ನಾರಾಯಣ , ಒಬಿಸಿ ಅಧ್ಯಕ್ಷ ನರೇಂದ್ರ ಬಾಬು,ಮಾಜಿ ಉಪ ಮಹಾಪೌರರಾದ ಎಸ್ ಹರೀಶ್, ಬಿಜೆಪಿ ಮಂಡಲ ಅಧ್ಯಕ್ಷರಾದ ರಾಘವೇಂದ್ರ ಶೆಟ್ಟಿ, ಮುಖಂಡರುಗಳಾದ ಎನ್ ಜಯರಾಂ , ವೆಂಕಟೇಶ್ ಮೂರ್ತಿ,ನಾರಾಯಣ ಸ್ವಾಮಿ, ಸೇರಿದಂತೆ ಹಲವು  ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular