ಮಂಡ್ಯ: ಕಾವೇರಿ ಹೋರಾಟಕ್ಕೆ ಮುಸಲ್ಮಾನರು ಬೆಂಬಲ ವ್ಯಕ್ತಪಡಿಸಿದ್ದು, ಪುಟ್ಟ ಪುಟ್ಟ ಮಕ್ಕಳೊಂದಿಗೆ ಹೋರಾಟಕ್ಕಿಳಿದಿದ್ದಾರೆ.
ತಲೆ ಮೇಲೆ ಖಾಲಿ ಕೊಡಗಳನ್ನ ಹೊತ್ತು ಬಂದು ಪುಟಾಣಿಗಳು, ಬೇಕೆ ಬೇಕು ನೀರು ಬೇಕು, ನ್ಯಾಯ ಬೇಕು ಎಂದು ಘೋಷಣೆ ಕೂಗಿದ್ದಾರೆ.
ಮಂಡ್ಯದ ಬೀಡಿ ಕಾರ್ಮಿಕರ ಕಾಲೋನಿಯಿಂದ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿ, ವಿಶ್ವೇಶ್ವರಯ್ಯ ಪ್ರತಿಮೆ ಎದುರು ಧರಣಿಯಲ್ಲಿ ಭಾಗಿಯಾಗುವ ಮೂಲಕ ಅಂತ್ಯವಾಯಿತು.