ಮಂಗಳೂರು(ದಕ್ಷಿಣ ಕನ್ನಡ): ಭಜರಂಗದಳದ ನೇತೃತ್ವದಲ್ಲಿ ಅಕ್ಟೋಬರ್ 9 ರಂದು ಬೃಹತ್ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೃಹತ್ ಸಾರ್ವಜನಿಕ ಸಭೆ ಮಂಗಳೂರಿನಲ್ಲಿ ನಡೆಯಲಿದೆ ಎಂದು ವಿಶ್ವಹಿಂದು ಪರಿಷತ್ ಹೇಳಿದೆ.
ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮುಖಂಡರು ಈ ಶೌರ್ಯ ಜಾಗರಣ ರಥ ಯಾತ್ರೆಯು ಸೆ.25ರಂದು ಚಿತ್ರದುರ್ಗದಿಂದ ಹೊರಟು ಅ. 9ಕ್ಕೆ ಮಂಗಳೂರಿಗೆ ಆಗಮಿಸಲಿದೆ.
ರಥಕ್ಕೆ ಅದ್ದೂರಿ ಸ್ವಾಗತ ನೀಡಿ ಬಳಿಕ ಮಂಗಳೂರಿನಲ್ಲಿ ಬೃಹತ್ ಶೌರ್ಯ ಜಾಗರಣ ರಥವನ್ನು ಅದ್ದೂರಿ ಸ್ವಾಗತದೊಂದಿಗೆ ನಗರದ ಅಂಬೇಡ್ಕರ್ ವೃತ್ತದಿಂದ ಕದ್ರಿ ಮೈದಾನದವರೆಗೆ ಬೃಹತ್ ಶೋಭಾಯಾತ್ರೆ ನಡೆಯಲಿದ್ದು, ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪ್ರಮುಖರು ಸೇರಿದಂತೆ ವಿವಿಧ ಗಣ್ಯರು ಈ ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭ ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿ ಅಧ್ಯಕ್ಷ ಗಿರಿಧರ್ ಶೆಟ್ಟಿ, ಶೌರ್ಯ ಜಾಗರಣ ರಥಯಾತ್ರೆ ಸ್ವಾಗತ ಸಮಿತಿ ಕಾರ್ಯದರ್ಶಿ ಭುಜಂಗ ಕುಲಾಲ್, ಜಿಲ್ಲಾಧ್ಯಕ್ಷ ಎಚ್ .ಕೆ ಪುರುಷತ್ತೋಮ, ಜಿಲ್ಲಾ ಕಾರ್ಯದರ್ಶಿ ಶಿವಾನಂದ್ ಮೆಂಡನ್, ಜಿಲ್ಲಾ ಸಂಯೋಜಕ ನವೀನ ಮೂಡುಶೆಡ್ಡೆ ಉಪಸ್ಥಿತರಿದ್ದರು.