Sunday, April 20, 2025
Google search engine

HomeUncategorizedಯೋಜನೆಗಳ ಪರಿಣಾಮಕಾರಿ ಜಾರಿಗೆ ಬ್ಯಾಂಕ್‍ಗಳು ಸಹಕರಿಸಬೇಕು : ಬಿ.ವೈ.ರಾಘವೇಂದ್ರ

ಯೋಜನೆಗಳ ಪರಿಣಾಮಕಾರಿ ಜಾರಿಗೆ ಬ್ಯಾಂಕ್‍ಗಳು ಸಹಕರಿಸಬೇಕು : ಬಿ.ವೈ.ರಾಘವೇಂದ್ರ

ಶಿವಮೊಗ್ಗ :ಕೇಂದ್ರ ಪುರಸ್ಕೃತ ಯೋಜನೆಗಳು/ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಹಾಗೂ ಬ್ಯಾಂಕುಗಳು ಇದಕ್ಕೆ ಸಹಕರಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.

ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಇಂದು ಆಯೋಜಿಸಲಾಗಿದ್ದ ಬ್ಯಾಂಕರ್ಸ್ ಡಿಸಿಸಿ ಮತ್ತು ಡಿಎಲ್‍ಆರ್‍ಸಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಿಎಂ ಸ್ವನಿಧಿ ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೆ ತರಬೇಕು. ನಗರ ಸ್ಥಳೀಯ ಸಂಸ್ಥೆಗಳು ಮತ್ತು ಸಂಬಂಧಿಸಿದ ಕಚೇರಿಗಳಿಂದ ಅರ್ಜಿಗಳನ್ನು ಬೇಗ ಕಳುಹಿಸಿದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾಲ ಸೌಲಭ್ಯ ನೀಡಲು ಅವಕಾಶವಾಗುತ್ತದೆ. ಈ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ಕುರಿತು ಅರಿವು ಹೆಚ್ಚಿಸಬೇಕು. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಬರುವ ತಿಂಗಳಲ್ಲಿ ಎಲ್ಲ ಯೋಜನೆಗಳನ್ನು ಕೇಂದ್ರೀಕೃತಗೊಳಿಸಿದ ಒಂದು ದೊಡ್ಡದಾದ ಕಾರ್ಯಕ್ರಮ ಆಯೋಜಿಸುವ ಉದ್ದೇಶ ಹೊಂದಲಾಗಿದೆ. ಆ ಕಾರ್ಯಕ್ರಮದಲ್ಲಿ ಪ್ರಸ್ತುತ ಅರ್ಹರಾದ ಎಲ್ಲ ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗವುದು ಎಂದರು.

ಹಾಗು ಡಿಸೆಂಬರ್ 6 ರಂದು ನಗರದ ಫ್ರೀಡಂ ಪಾರ್ಕಿನಲ್ಲಿ 3 ದಿನಗಳ ಸ್ವದೇಶಿ ಮೇಳವನ್ನು ಏರ್ಪಡಿಸಲಾಗುವುದು. ಈ ಕಾರ್ಯಕ್ರಮಕ್ಕೆ ಎಲ್ಲ ಬ್ಯಾಂಕುಗಳು ಸಹಕರಿಸಬೇಕೆಂದರು. ಮೊದಲನೇ ತ್ರೈಮಾಸಕದಲ್ಲಿ ಆದ್ಯತಾರಹಿತ ವಲಯದಲ್ಲಿ ರೂ.3 ಕೋಟಿ ಶಿಕ್ಷಣ ಸಾಲ ಮತ್ತು ರೂ.90 ಕೋಟಿ ಹೌಸಿಂಗ್ ಸಾಲ ನೀಡಲಾಗಿದ್ದು ಕ್ರಮವಾಗಿ ಶೇ13.04 ಮತ್ತು 16.85 ಪ್ರಗತಿ ಸಾಧಿಸಲಾಗಿದೆ. ಬ್ಯಾಂಕ್‍ಗಳು ಶಿಕ್ಷಣ ಸಾಲ ಮತ್ತು ವಸತಿ ಸಾಲಗಳಿಗೆ ಹೆಚ್ಚಿನ ಗಮನ ಹರಿಸಬೇಕೆಂದರು.

ಪ್ರಧಾನಮಂತ್ರಿಯವರು ಸೆ.17 ರಂದು ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದು ಜಿಲ್ಲೆಯಲ್ಲಿಯೂ ಶೀಘ್ರದಲ್ಲೇ ಅದರ ನೋಂದಣಿ ಆರಂಭವಾಗುವುದು. ಸುಮಾರು 18 ಗುಂಪಿನ ಕುಶಲಕರ್ಮಿಗಳಿಗೆ ಈ ಯೋಜನೆಯಡಿ 1 ಲಕ್ಷದವರೆಗೆ ಸಾಲ ಸೌಲಭ್ಯ ದೊರಕಲಿದೆ. 18 ತಿಂಗಳ ಒಳಗೆ ತೀರಿಸಿದರೆ ಮತ್ತೆ ರೂ.2 ಲಕ್ಷ ಸಾಲ ಸಿಗಲಿದೆ. ಈ ಯೋಜನೆಯಡಿ ಫಲಾನುಭವಿಗಳಿಗೆ ಕಾರ್ಡ್‍ನ್ನು ನೀಡಲಾಗುವುದು. ಕುಶಲಕರ್ಮಿಗಳಿಗೆ ತರಬೇತಿ, ಭತ್ಯೆ ನೀಡಲಾಗುವುದು ಹಾಗೂ ಅರ್ಹರಿಗೆ ಟೂಲ್ ಕಿಟ್‍ಗಳನ್ನು ನೀಡಲಾಗುವುದು. ಸಿಎಸ್‍ಸಿ ಗಳಲ್ಲಿ ಫಲಾನುಭವಿಗಳು ನೋಂದಣಿ ಆಗಬೇಕು.

ಪಿಎಂ ಜನಸುರಕ್ಷಾ ಯೋಜನೆಗಳಾದ ಪಿಎಂಜೆಜೆಬಿವೈ ಯಲ್ಲಿ ಶೇ100.04 ಮತ್ತು ಪಿಎಂಸ್‍ಬಿವೈ ಯೋಜನೆಯಡಿ ಶೇ101.37 ಪ್ರಗತಿ ಸಾಧಿಸುವ ಮೂಲಕ ಪಿಎಂಬಿಎಸ್‍ವೈ ಯೋಜನೆಯಡಿ ರಾಜ್ಯದಲ್ಲಿ 1ನೇ ಸ್ಥಾನ ಮತ್ತು ಜಂಟಿ ಯೋಜನೆಯಾದ ಪಿಎಂಎಸ್‍ಬಿವೈ ಮತ್ತು ಪಿಎಂಜೆಜೆಬಿವೈ ನಲ್ಲಿ 2ನೇ ಸ್ಥಾನದಲ್ಲಿದೆ. ಹಾಗೂ ಈ ಯೋಜನೆಗಳಡಿ ಕೆನರಾ ಬ್ಯಾಂಕ್ ಅತ್ಯುತ್ತಮ ಪ್ರಗತಿ ಸಾಧಿಸಿದೆ. ಬೀದಿಬದಿ ವ್ಯಾಪಾರಸ್ಥರಿಗೆ ಸಾಲ ನೀಡುವ ಯೋಜನೆಯಾದ ಪಿಎಂ ಸ್ವನಿಧಿ ಯೋಜನೆಯ ಮೊದಲ ಹಂತದಲ್ಲಿ ಶೇ.99.22, ಎರಡನೇ ಹಂತದಲ್ಲಿ ಶೇ.98.17 ಮತ್ತು ಮೂರನೇ ಹಂತ ಸಾಲ ನೀಡುವಿಕೆಯಲ್ಲಿ ಬ್ಯಾಂಕುಗಳು ಶೇ.98.52 ಪ್ರಗತಿ ಸಾಧಿಸಿವೆ ಎಂದರು.

RELATED ARTICLES
- Advertisment -
Google search engine

Most Popular