Monday, April 21, 2025
Google search engine

Homeಸ್ಥಳೀಯಮೈಸೂರಿನಲ್ಲಿ ಮುಂದುವರೆದ ಕಾವೇರಿ ಕಿಚ್ಚು

ಮೈಸೂರಿನಲ್ಲಿ ಮುಂದುವರೆದ ಕಾವೇರಿ ಕಿಚ್ಚು

ಮೈಸೂರು: ಮತ್ತೆ ತಮಿಳುನಾಡಿಗೆ ನೀರು ಬಿಡುವಂತೆ CWRC ಆದೇಶ ಹೊರಡಿಸಿರುವ ಹಿನ್ನೆಲೆ ಮೈಸೂರಿನಲ್ಲಿ ಕಾವೇರಿಗಾಗಿ ಹೋರಾಟ ಮುಂದುರೆದಿದೆ ಕರ್ನಾಟಕ ಪ್ರಜಾಪಾರ್ಟಿ ವತಿಯಿಂದ ವಿನೂತನ ಪ್ರತಿಭಟನೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಅಂಚೆ ಚಳುವಳಿ ಮೂಲಕ ಆಕ್ರೋಶ ಹೊರ ಹಾಕಲಾಗುತ್ತಿದೆ. ಇನ್ನು ಮತ್ತೊಂದೆಡೆ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಜಿಲ್ಲಾ ಪಂಚಾಯತ್ ಮುಂಭಾಗ ಪ್ರತಿಭಟನೆ ನಡೆಯುತ್ತಿದೆ. ಮತ್ತು ಮೈಸೂರಿನ ಗಾಂಧಿ ವೃತ್ತದಲ್ಲಿ ಜೆಡಿಎಸ್‌ನಿಂದ ಧರಣಿ ನಡೆಯುತ್ತಿದೆ.

ಕರ್ನಾಟಕ ಪ್ರಜಾಪಾರ್ಟಿ ಪಕ್ಷದ ರಾಜ್ಯಾಧ್ಯಕ್ಷ ವಕೀಲ ಶಿವಣ್ಣ ರವರ ನೇತೃತ್ವದಲ್ಲಿ ಅಂಚೆ ಚಳುವಳಿ ನಡೆಯುತ್ತಿದ್ದು ಕಾರ್ಯಕರ್ತರೆಲ್ಲ ಸೇರಿಕೊಂಡು ದೆಹಲಿಯ ಪ್ರಧಾನಿಗಳ ಕಚೇರಿಗೆ ಅಂಚೆ ಪೋಸ್ಟ್ ಮಾಡಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡುಗಡೆ ಮಾಡಬಾರದು. ಕಾವೇರಿ ವಿಚಾರದಲ್ಲಿ ಪ್ರಧಾನಿಗಳು ಮಧ್ಯ ಪ್ರವೇಶ ಮಾಡಬೇಕು. ಈ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ರಾಜ್ಯದಿಂದ ಮತ್ತೆ ನೀರು ಹರಿಸಿದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರ ಹಾಗೂ ಪ್ರಾಧಿಕಾರದ ವಿರುದ್ಧ ಧಿಕ್ಕಾರ ಕೂಗಿ ಪ್ರತಿಭಟನಾಕಾರರು ಆಕ್ರೋಶ ಹೊರ ಹಾಕಿದ್ದಾರೆ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಪ್ರಾಧಿಕಾರದ ಆದೇಶ ಪಾಲನೆ ಮಾಡಬಾರದು. ಎಲ್ಲೋ ಎಸಿ ರೂಮಿನಲ್ಲಿ ಕುಳಿತು ಆದೇಶ ಮಾಡುವುದಲ್ಲ. ವಾಸ್ತವ ಸ್ಥಿತಿ ಅರಿತು ಆದೇಶ ಮಾಡಬೇಕು. ಈ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸುವಂತೆ ಸಂಸದರು ಒತ್ತಾಯ ಹೇರಬೇಕು. ಕಾವೇರಿ ವಿಚಾರದಲ್ಲಿ ಶ್ವಾಶತ ಪರಿಹಾರ ಸಿಗಬೇಕು. ೨೯ರ ಕರ್ನಾಟಕ ಬಂದ್ ಗೆ ನಮ್ಮ ಸಂಪೂರ್ಣ ಸಹಕಾರವಿದೆ. ಮೈಸೂರಿನಲ್ಲೂ ಕರ್ನಾಟಕ ಬಂದ್ ಯಶಸ್ವಿ ಆಗಲಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನದ ಬಣದ ಜಗದೀಶ್ ಹೇಳಿದರು.

RELATED ARTICLES
- Advertisment -
Google search engine

Most Popular